ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉರಿಗೌಡ, ನಂಜೇಗೌಡ ವಿಚಾರ ಮುಂದುವರಿಸುತ್ತೇವೆ: ಸಿ.ಟಿ.ರವಿ

Last Updated 21 ಮಾರ್ಚ್ 2023, 13:20 IST
ಅಕ್ಷರ ಗಾತ್ರ

ತುಮಕೂರು: ಉರಿಗೌಡ, ನಂಜೇಗೌಡ ಕುರಿತು ವಾಸ್ತವಿಕ ಸತ್ಯವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ತುರುವೇಕೆರೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಟಿಪ್ಪುವನ್ನು ಉರಿಗೌಡ, ನಂಜೇಗೌಡ ಕೊಂದಿರುವ ಬಗ್ಗೆ ದಾಖಲೆಗಳನ್ನು ಇಟ್ಟುಕೊಂಡು ಚರ್ಚಿಸಲಾಗುವುದು. ವಾಸ್ತವವನ್ನು ಸ್ವಾಮೀಜಿ ಗಮನಕ್ಕೆ ತಂದು ಈ ವಿಚಾರವನ್ನು ಮುಂದುವರಿಸುತ್ತೇವೆ’ ಎಂದು ತಿಳಿಸಿದರು.

ಉರಿಗೌಡ, ನಂಜೇಗೌಡ ಕಾಲ್ಪನಿಕ ಪಾತ್ರಗಳಲ್ಲ. ಸತ್ಯದ ಪಾತ್ರಗಳು. ಸಾಹಿತಿ ಡಾ.ದೇಜಗೌ ಅವರು ‘ಸುವರ್ಣ ಮಂಡ್ಯ’ ಪುಸ್ತಕದಲ್ಲಿ ದಾಖಲಿಸಿದ್ದಾರೆ. ಸುಳ್ಳು, ಕಾಲ್ಪನಿಕ ಎಂದು ಹೇಳುವವರು ಕ್ಷಮೆ ಕೇಳಬೇಕು. ಟಿಪ್ಪು ಕೊಂದಿದ್ದಕ್ಕೆ ದಾಖಲೆ ಏನಿದೆ ಎಂದು ಹೊಸ ವರಸೆ ತೆಗೆದಿದ್ದಾರೆ. ಟಿಪ್ಪು ಕೊಂದವರು ಅಪರಿಚಿತರು ಎನ್ನುತ್ತಾರೆ. ನಾವು ಅಪರಿಚಿತರಲ್ಲ ಎನ್ನುತ್ತೇವೆ. ಈ ಬಗ್ಗೆ ಸಂಶೋಧನೆಗಳು ನಡೆಯಲಿ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT