ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಅಂಗವಿಕಲರಿಗೆ ವ್ಹೀಲ್ ಚೇರ್ ವಿತರಣೆ

Last Updated 28 ಸೆಪ್ಟೆಂಬರ್ 2021, 3:36 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು 50ಅಂಗವಿಕಲ ಫಲಾನುಭವಿಗಳಿಗೆ ವ್ಹೀಲ್ ಚೇರ್ ವಿತರಣೆ ಮಾಡಲಿದ್ದಾರೆ.

ಮಂಗಳವಾರ ಬೆಳಿಗ್ಗೆ 11.15 ಗಂಟೆಗೆ ದೇವರಾಯಪಟ್ಟಣ ಗ್ರಾಮದ ಬೆಳಗುಂಬ ರಸ್ತೆಯಲ್ಲಿರುವ ದಿ ಸ್ಟಾಂಡರ್ಡ್ ಬ್ರಿಕ್ ಅಂಡ್ ಟೈಲ್ ಕಂಪನಿ ಆವರಣದಲ್ಲಿ ವ್ಹೀಲ್ ಚೇರ್ ವಿತರಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ರೋಟರಿ ಕ್ಲಬ್, ದಿ ಸ್ಟಾಂಡರ್ಡ್ ಬ್ರಿಕ್ ಅಂಡ್ ಟೈಲ್ ಕಂಪನಿ, ಎಂಎಎಫ್ ಕ್ಲೋಥಿಂಗ್ ಸಂಸ್ಥೆ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ
ತುಮಕೂರು:
ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ವೀರಸಾಗರ ಸರ್ಕಾರಿ ವಸತಿ ಶಾಲೆಯಲ್ಲಿ 1ರಿಂದ 5ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಶಾಲಾಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಿ ಪ್ರವೇಶ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಜಾತಿ, ಆದಾಯ ಪ್ರಮಾಣ ಪತ್ರ, ಇತ್ತೀಚಿನ ಭಾವಚಿತ್ರ ಸೇರಿದಂತೆ ಇತರೆ ದಾಖಲಾತಿಗಳನ್ನು ಲಗತ್ತಿಸಿ ಸಲ್ಲಿಸಬೇಕು.

ವಿವರಗಳಿಗೆ ಮೊಬೈಲ್ 96110 29592 ಸಂಪರ್ಕಿಸುವಂತೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ.ಎಸ್. ಶಿವಣ್ಣ ತಿಳಿಸಿದ್ದಾರೆ.

ಆರೋಗ್ಯ ಶಿಬಿರ
ತುಮಕೂರು:
ನಗರದ ಯಲ್ಲಾಪುರ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಲಲಿತ ನರ್ಸಿಂಗ್ ಹೋಂ ವತಿಯಿಂದ ಸಂಜೀವಣ್ಣ ಸ್ಮರಣಾರ್ಥ ಡಾ.ಎ.ಎಸ್‌. ಗಿರೀಶ್ ನೇತೃತ್ವದಲ್ಲಿ ಉಚಿತವಾಗಿ ಮಧುಮೇಹ, ನರರೋಗ, ಆಸ್ತಮ ತಪಾಸಣಾ ಶಿಬಿರವನ್ನು ಭಾನುವಾರ ಏರ್ಪಡಿಸಲಾಗಿತ್ತು.

ಶಿಬಿರದಲ್ಲಿ 100ಕ್ಕೂ ಹೆಚ್ಚು ಮಂದಿಗೆ ಔಷಧಿ ವಿತರಿಸಲಾಯಿತು. ಡಾ.ರುಬೀನಾ, ಫಾರ್ಮಾಸಿಸ್ಟ್ ವಿನಯ್, ಸಿಬ್ಬಂದಿ ಸುಮಾ, ಗಂಗಾ, ತನು, ಚಂದನ್, ದಿವ್ಯಾ, ಅಜಯ್, ವೆಂಕಟೇಶ್, ಶ್ಯಾಮ್ ಇದ್ದರು.

ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ತುಮಕೂರು:
ಕೃಷಿ ಇಲಾಖೆಯು ಆತ್ಮ ಯೋಜನೆಯಡಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಕೃಷಿ ವಲಯದಲ್ಲಿ ಇತರರಿಗಿಂತ ವಿಭಿನ್ನವಾಗಿ ಹೊಸ ಅನ್ವೇಷಣೆ, ವಿಶಿಷ್ಟ ಮತ್ತು ವಿಶೇಷ ಸಾಧನೆಗಳನ್ನು ಮಾಡಿರುವ ರೈತರು ಅ. 23ರ ಒಳಗಾಗಿ ಸಲ್ಲಿಸಬಹುದಾಗಿದೆ.

ಅರ್ಜಿ, ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ, ಆಯಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ ತಿಳಿಸಿದ್ದಾರೆ.

ಸೂಕ್ಷ್ಮ ಹನಿ ನೀರಾವರಿ ಸೌಲಭ್ಯಕ್ಕೆ ಸಹಾಯಧನ
ತುಮಕೂರು:
ತೋಟಗಾರಿಕೆ ಇಲಾಖೆಯು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ಹನಿ ನೀರಾವರಿ ಘಟಕಗಳಿಗೆ (ಅಡಿಕೆ ಬೆಳೆ ಹೊರತುಪಡಿಸಿ) ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಿದೆ.

ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಹನಿ ನೀರಾವರಿ ಸೌಲಭ್ಯ ಅಳವಡಿಸಿಕೊಳ್ಳಲು ಶೇ 45ರಷ್ಟು ಹಾಗೂ ಹನಿ ನೀರಾವರಿ ಅಳವಡಿಸಿದ ಸಣ್ಣ ಮತ್ತು ಅತಿಸಣ್ಣ ರೈತರು, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ರೈತರಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶದವರೆಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಶೇ 90ರಷ್ಟು ಸಹಾಯಧನ ನೀಡಲಾಗುತ್ತದೆ.

ತೋಟಗಾರಿಕೆ ಇಲಾಖೆಯಿಂದ ಅನುಮೋದನೆಗೊಂಡಿರುವ ಕಂಪನಿಗಳಿಂದ ಮಾತ್ರ ಹನಿ ನೀರಾವರಿ ಘಟಕಗಳನ್ನು ಅಳವಡಿಕೊಳ್ಳಬೇಕು. ಆಸಕ್ತ ರೈತರು ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಮಾಹಿತಿಗಾಗಿ ತಾಲ್ಲೂಕು ಮಟ್ಟದ ಇಲಾಖೆ ಅಧಿಕಾರಿ ಅಥವಾ ದೂರವಾಣಿ ತುಮಕೂರು 0816-2279705, ಗುಬ್ಬಿ 08131-222659, ಕುಣಿಗಲ್ 08132-221981, ತಿಪಟೂರು 08134-251424, ಚಿಕ್ಕನಾಯಕನಹಳ್ಳಿ 08133-267457, ತುರುವೇಕೆರೆ 08139-288350, ಶಿರಾ 08135-295530, ಕೊರಟಗೆರೆ 08138-232920, ಮಧುಗಿರಿ 08137-282417, ಪಾವಗಡ 08136-244064 ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು ತಿಳಿಸಿದ್ದಾರೆ.

ಹಾಸ್ಟೆಲ್ ಪ್ರವೇಶ

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ 6ರಿಂದ 10ನೇ ತರಗತಿ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅ. 11ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ತೊಂದರೆಯಾದರೆ ವಿದ್ಯಾರ್ಥಿನಿಲಯಗಳ ಮೇಲ್ವಿಚಾರಕರು, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಮಧುಗಿರಿ:
ತಾಲ್ಲೂಕಿನಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆ ಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ. ಅಭ್ಯರ್ಥಿಗಳ ಕುರಿತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅ. 7ರ ಸಂಜೆ 5.30ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಸಿಡಿಪಿಒ ಎಸ್. ಅನಿತಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT