ತುಮಕೂರು: ಕೇಂದ್ರ ಸರ್ಕಾರ ಸೆ. 14ರಂದು ಹಿಂದಿ ದಿನವಾಗಿ ಆಚರಿಸಲು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರುತ್ತಿರುವುದಕ್ಕೆ ಜಯ ಕರ್ನಾಟಕ ಸಂಘಟನೆ ವಿರೋಧಿಸಿದೆ.

ಸಂಘಟನೆ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಒಕ್ಕೂಟ ಸರ್ಕಾರವು ಹಿಂದಿ ಹೇರುವ ಮೂಲಕ ದಕ್ಷಿಣ ಭಾರತದ ದ್ರಾವಿಡ ಭಾಷೆಗಳ ಮೇಲೆ ಗದಾಪ್ರಹಾರ ನಡೆಸಲು ಹೊರಟಿದೆ. ಇದಕ್ಕೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಡಬಾರದು. ಹಿಂದಿ ದಿವಸ ಆಚರಣೆ ಕಡ್ಡಾಯ ಮಾಡಿರುವುದನ್ನು ರದ್ದುಪಡಿಸುವಂತೆ ಆಗ್ರಹಿಸಿದರು.

ಸಂವಿಧಾನದ ಪ್ರಕಾರ ಭಾರತಕ್ಕೆ ಯಾವುದೇ ರಾಷ್ಟ್ರೀಯ ಭಾಷೆ ಇಲ್ಲ. ಕಲಂ 344(1)ರ ಪ್ರಕಾರ ದೇಶದ 22 ಭಾಷೆಗಳಿಗೆ ರಾಷ್ಟ್ರೀಯ ಸ್ಥಾನಮಾನ ದೊರೆತಿದೆ. ಇದರಲ್ಲಿ ಹಿಂದಿ, ಕನ್ನಡ ಸೇರಿದಂತೆ ಬಹುತೇಕ ಪ್ರಾದೇಶಿಕ ಭಾಷೆಗಳಿವೆ. ಅಲ್ಲದೆ ಕಲಂ 344(1) ಮತ್ತು 351ರಲ್ಲಿ ರಾಷ್ಟ್ರೀಯ ಮಾನ್ಯತೆ ಪಡೆದ 22 ಭಾಷೆಗಳಲ್ಲಿ ಕನ್ನಡವೇ ಅತ್ಯಂತ ಉತ್ಕೃಷ್ಟ ಭಾಷೆ ಎಂದು ಉಲ್ಲೇಖಿಸಲಾಗಿದೆ. ಕಲಂ 350ಎ ಪ್ರಕಾರ ಪ್ರತಿ ರಾಜ್ಯ ಸರ್ಕಾರವೂ ತನ್ನ ಆಡಳಿತ ಭಾಷೆಯಾಗಿ ಮಾತೃಭಾಷೆಯನ್ನೇ ಬಳಸಬೇಕು. ಶಿಕ್ಷಣವನ್ನು ಮಾತೃಭಾಷೆಯಲ್ಲೇ ನೀಡಿ, ಪ್ರೋತ್ಸಾಹಿಸುವಂತೆ ಉಲ್ಲೇಖಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಿಯಮ ಮೀರಿ ಕೇಂದ್ರ ಸರ್ಕಾರಸುತ್ತೋಲೆ ಹೊರಡಿಸಿದೆ. ಹಿಂದಿ ಭಾಷೆಗೆ ಉತ್ತೇಜನ, ಒತ್ತು ನೀಡಲು ಹಿಂದಿ ದಿವಸ ಆಚರಿಸಲು ಒತ್ತಡ ಹೇರುತ್ತಿರುವುದು ಸರಿಯಲ್ಲ. ಇದು ರಾಜ್ಯಗಳ ಸಾರ್ವಭೌಮತೆಯನ್ನು ಪ್ರಶ್ನೆ ಮಾಡುವಂತಹ ಪ್ರಕ್ರಿಯೆಯಾಗಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ತನ್ನ ಸರ್ವಾಧಿಕಾರಿ ಧೋರಣೆಯ ಮೂಲಕಹಿಂದಿ ಭಾಷೆ ಹೇರಲು ಹೊರಟಿದ್ದು, ಮುಂದಿನ ದಿನಗಳಲ್ಲಿ ಆಂತರಿಕ ಕಲಹ, ಅಶಾಂತಿಗೆ ಕಾರಣವಾಗಲಿದೆ. ಹಿಂದಿ ದಿವಸ ಆಚರಣೆಗೆ ಮುಂದಾದರೆ ಹೋರಾಟ ನಡೆಸಲಾಗುವುದು ಎಂದು ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಅರುಣ್ ಕುಮಾರ್ ತಿಳಿಸಿದ್ದಾರೆ.

ಸಂಘಟನೆ ಮುಖಂಡರಾದ ದಿವ್ಯಾ, ಹರೀಶ್, ಸುನೀಲ್, ರಘು ದೀಕ್ಷಿತ್, ಸೋಮಶೇಖರಗೌಡ, ಪ್ರತಾಪ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.