ಕೊರಟಗೆರೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪಟ್ಟಣದಲ್ಲಿ ಗುರುವಾರ ನಡೆದಿದೆ.

ಪಟ್ಟಣದ ರೇಣುಕಾ ಆಸ್ಪತ್ರೆ ಹಿಂಭಾಗ ವಾಸವಾಗಿರುವ ಜಬೀನ (40) ಕೊಲೆಯಾದ ದುರ್ದೈವಿ. ಪತಿ ಚಾಂದ್ಪಾಷನನ್ನು ಪೊಲೀಸರು ಬಂಧಿಸಿದ್ದಾರೆ.

ಜಬೀನ ಮತ್ತು ಮಗ ಮಹಮ್ಮದ್ ಅಲಿ ಮನೆಯಲ್ಲಿ ಗಾಢನಿದ್ರೆಯಲ್ಲಿ ಮಲಗಿದ್ದ ವೇಳೆ ಚಾಂದ್ ಪಾಷ ದೊಣ್ಣೆಯಿಂದ ಇಬ್ಬರ ತಲೆಗೆ ಬಲವಾಗಿ ಹೊಡೆದಿದ್ದಾನೆ. ಹೆಂಡತಿ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಮಹಮ್ಮದ್ ಅಲಿಯನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಪಿಐ ಎಫ್.ಕೆ. ನಧಾಪ್ ಮತ್ತು ಪಿಎಸ್ಐ ಎಚ್. ಮುತ್ತುರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.