ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಮೇಲನಹಳ್ಳಿ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶುಕ್ರವಾರ ಚಿರತೆ ಬಿದ್ದಿದೆ.
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಹಿಂಬದಿಯ ಗುಡ್ಡದ ಬಳಿ ಚಿರತೆ ಓಡಾಡುತ್ತಿರುವ ಬಗ್ಗೆ ಶಾಲೆಯ ಭದ್ರತಾ ಸಿಬ್ಬಂದಿ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆಯಿಂದ ಬೋನಿಡಲಾಗಿತ್ತು.
ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿಂದ ಚಿರತೆಯನ್ನು ಸ್ಥಳಾಂತರಿಸಿದರು. ಚಿರತೆ ವೈದ್ಯಕೀಯ ಪರೀಕ್ಷೆ ನಡೆಸಿ, ನಂತರ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗುತ್ತದೆ.