ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವನ್ಯಜೀವಿ ಸಂರಕ್ಷಣೆ ಎಲ್ಲರ ಹೊಣೆ’

Last Updated 26 ಸೆಪ್ಟೆಂಬರ್ 2020, 2:25 IST
ಅಕ್ಷರ ಗಾತ್ರ

ಪಾವಗಡ: ವನ್ಯಜೀವಿಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ವಲಯ ಅರಣ್ಯಾಧಿಕಾರಿ ಸುರೇಶ್ ಹೇಳಿದರು.

ತಾಲ್ಲೂಕಿನ ಎರ‍್ರಮ್ಮನಹಳ್ಳಿಯಲ್ಲಿ ಶುಕ್ರವಾರ ನಡೆದ ಕೃಷಿ ಜತೆಗೆ ಆದಾಯೋತ್ಪನ್ನ ಚಟುವಟಿಕೆಗೆ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೆಟ್ಟಕ್ಕೆ ಬೆಂಕಿ ಇಟ್ಟರೆ ವನ್ಯಜೀವಿಗಳು ಸಾಯುತ್ತವೆ. ಹೀಗಾಗಿ ಗ್ರಾಮೀಣ ಜನರು ಕಾಡು, ಬೆಟ್ಟ, ಗುಡ್ಡಗಳಲ್ಲಿ ಬೆಂಕಿ ಬೀಳದಂತೆ ಎಚ್ಚರವಹಿಸುವ ಮೂಲಕ ಅರಣ್ಯ ಇಲಾಖೆಗೆ ಸಹಕಾರ ನೀಡಬೇಕು. ಕೃಷಿ ಜತೆಗೆ ಆದಾಯೋತ್ಪನ್ನಚಟುವಟಿಕೆಗಳನ್ನು ನಡೆಸಿದರೆ ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುತ್ತದೆ. ಆದಾಯವನ್ನು ಹೆಚ್ಚಿಸಿಕೊಳ್ಳುವ ಜತೆಗೆ ಉಳಿತಾಯದ ಕಡೆಗೂ ಆದ್ಯತೆ ನೀಡಬೇಕು ಎಂದರು.

ಯುವಕ ಸಂಘ, ಸ್ತ್ರೀ ಶಕ್ತಿ,ಸ್ವಸಹಾಯ ಸಂಘಗಳಿಗೆ ಆದಾಯೋತ್ಪನ್ನಕ್ಕಾಗಿ ₹50 ಸಾವಿರ ಸಾಲದ ಚೆಕ್ ವಿತರಿಸಲಾಯಿತು.

ಕೋಟಗುಡ್ಡ ಶಾಖಾ ಉಪವಲಯ ಅರಣ್ಯಾಧಿಕಾರಿ ಬಸವರಾಜು, ಶರತ್ ಕುಮಾರ್, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಕುರಿಮಲ್ಲಪ್ಪ, ಅರಣ್ಯ ರಕ್ಷಕ ತಿಪ್ಪೇಸ್ವಾಮಿ, ಗ್ರಾಮ ಅರಣ್ಯ ಸಮಿತಿ ಸದಸ್ಯ ರಾಮಮೂರ್ತಿ, ನಂಜುಂಡಪ್ಪ, ರಾಮಾಂಜಪ್ಪ , ವೀರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT