ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾವುದೇ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲಲು ಬಿಡುವುದಿಲ್ಲ: ಬಿ.ಎಸ್‌.ಯಡಿಯೂರಪ್ಪ

Last Updated 25 ಅಕ್ಟೋಬರ್ 2020, 8:03 IST
ಅಕ್ಷರ ಗಾತ್ರ

ತುಮಕೂರು: ‘ಸಿದ್ದರಾಮಯ್ಯ ಅವರೇ, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ಯಾವುದೇ ಚುನಾವಣೆಗಳಲ್ಲೂ ನಿಮ್ಮ ಪಕ್ಷವನ್ನು (ಕಾಂಗ್ರೆಸ್) ಗೆಲ್ಲಲು ಬಿಡುವುದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸವಾಲು ಹಾಕಿದರು.

ನಗರದಲ್ಲಿ ಶನಿವಾರ ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಪರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.

‘ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಾವು 23 ಸ್ಥಾನ ಗೆಲ್ಲುತ್ತೇವೆ ಎಂದಾಗ ಕಾಂಗ್ರೆಸ್ ನಾಯಕರು ವ್ಯಂಗ್ಯವಾಡಿದ್ದರು. ಆದರೆ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆವು’ ಎಂದರು.

‘ಆರ್‌.ಆರ್.ನಗರ ಕ್ಷೇತ್ರದಲ್ಲಿ ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇವೆ. ಶಿರಾ ಮತ್ತು ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ’ ಎಂದು ಹೇಳಿದರು.

‘ನಾನು ‌ಚುನಾವಣಾ ಪ್ರಚಾರ ಸಭೆಗಳಿಗೆ ಹೋಗುತ್ತಿಲ್ಲ. ಆದರೂ ಇಲ್ಲಿಗೆ ಬಂದಿದ್ದೇನೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಎಂದು ತಿಳಿಯಿರಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT