ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸೆಂಬರ್‌ಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಶ್ರೀನಿವಾಸ್

Last Updated 23 ಜೂನ್ 2022, 18:39 IST
ಅಕ್ಷರ ಗಾತ್ರ

ತುಮಕೂರು: ‘ಶಾಸಕ ಸ್ಥಾನಕ್ಕೆ ಡಿಸೆಂಬರ್ ನಂತರ ರಾಜೀನಾಮೆ ಸಲ್ಲಿಸುತ್ತೇನೆ’ ಎಂದು ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಗುರುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಸದ್ಯಕ್ಕೆ ರಾಜೀನಾಮೆ ಬಗ್ಗೆ ಯೋಚಿಸಿಲ್ಲ. ‘ಪಕ್ಷದಿಂದ ಉಚ್ಚಾಟಿಸಿರುವುದರಿಂದ ಅವಮಾನ, ಮುಜುಗರ ಆಗಿಲ್ಲ. ಇದು ಮೊದಲೇ ಗೊತ್ತಿರುವ ವಿಚಾರ. ಗುಬ್ಬಿ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಿಸಿದ ಸಮಯದಲ್ಲೇ ಇಂತಹ ಬೆಳವಣಿಗೆಗಳು ನಡೆಯುತ್ತವೆ ಎಂಬುದು ಗೊತ್ತಿತ್ತು’ ಎಂದರು.

ಉದ್ದಿಮೆ ಸ್ಥಾಪನೆ: ಹಿಂದುಳಿದವರಿಗೆ ರಿಯಾಯಿತಿ

ತುಮಕೂರು: ‘ಆರ್ಥಿಕವಾಗಿ ಹಿಂದುಳಿದವರು ಉದ್ಯಮ ಸ್ಥಾಪಿಸಲು ಮುಂದಾದರೆ ಕೆಐಎಡಿಬಿಯಿಂದ ನೀಡುವ ನಿವೇಶನಕ್ಕೆ ಶೇ 75ರಷ್ಟು ರಿಯಾಯಿತಿ ನೀಡಲಾಗುವುದು’ ಎಂದು ಬೃಹತ್‌ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಕೈಗಾರಿಕಾ ಇಲಾಖೆ ಗುರುವಾರ ಇಲ್ಲಿ ಹಮ್ಮಿಕೊಂಡಿದ್ದ ‘ಉದ್ಯಮಿಯಾಗು–ಉದ್ಯೋಗ ನೀಡು’ ಹಾಗೂ ಕೈಗಾರಿಕಾ ಅದಾಲತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉದ್ದಿಮೆ ಸ್ಥಾಪಿಸುವ ಪರಿಶಿಷ್ಟರಿಗೆ ಕೆಐಎಡಿಬಿಯಿಂದ ನೀಡುವ ನಿವೇಶನಕ್ಕೆಈಗಾಗಲೇ ಶೇ 75ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಇದೇ ಸೌಲಭ್ಯವನ್ನು ಆರ್ಥಿಕವಾಗಿ ಹಿಂದುಳಿದವರಿಗೂ ನೀಡಲಾಗುವುದು ಎಂದು ಹೇಳಿದರು.

ಪಿಎಸ್‌ಐ ಅಕ್ರಮ: ಎಡಿಜಿಪಿ ಪೌಲ್‌ ವಿಚಾರಣೆ

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಸಂಬಂಧ ಪೊಲೀಸ್‌ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮ್ರಿತ್‌ ಪೌಲ್ ಅವರು ಸಿಐಡಿ ತನಿಖಾಧಿಕಾರಿಗಳ‌ ಎದುರು ಎರಡನೇ ಬಾರಿಗೆ ಗುರುವಾರ ಹಾಜರಾದರು.

ನೇಮಕಾತಿ ವಿಭಾಗದಲ್ಲಿ ಅಮ್ರಿತ್ ಪೌಲ್ ಎಡಿಜಿಪಿ ಆಗಿದ್ದಾಗ 545 ಪಿಎಸ್‌ಐ ಹುದ್ದೆಗಳಿಗೆ ಆಯ್ಕೆಗೆ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ಈ ಹಗರಣದಲ್ಲಿ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತರಾಜು ಅವರನ್ನು ಸಿಐಡಿ ಬಂಧಿಸಿದೆ. ಶಾಂತಕುಮಾರ್ ಹೇಳಿಕೆಯ ಮೇಲೆ, ಪ್ರಸ್ತುತ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿರುವ ಅಮ್ರಿತ್ ಪೌಲ್ ಈ ಹಿಂದೆ ಕೂಡ ಎರಡು ದಿನ ವಿಚಾರಣೆ ಎದುರಿಸಿದ್ದರು. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಈಗಾಗಲೇ 40 ದಾಟಿದೆ.

ಒಎಂಆರ್‌ ಶೀಟ್‌ ತಿದ್ದಿರುವ ಆರೋಪದಲ್ಲಿ ಬಂಧಿತರಾಗಿರುವ ಆರೋಪಿಗಳು ಅಮ್ರಿತ್‌ ಪೌಲ್‌ ವಿರುದ್ಧ ಹೇಳಿಕೆ ನೀಡಿದ್ದರು. ಬಂಧಿತರ ಹೇಳಿಕೆ ಮತ್ತು ಸಾಂದರ್ಭಿಕ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಸಿಐಡಿ ಎಡಿಜಿ ಉಮೇಶ್ ಕುಮಾರ್ ಸಮ್ಮುಖದಲ್ಲಿ ಡಿವೈಎಸ್ಪಿ ಶೇಖರ್ ಅವರು ಪೌಲ್ ಅವರನ್ನು ವಿಚಾರಣೆಗೆ ಒಳಪಡಿಸಿದರು ಎಂದು ಗೊತ್ತಾಗಿದೆ. ಈ ನಡುವೆ, ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಪೌಲ್‌ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT