ರಸ್ತೆ ಅಪಘಾತದಲ್ಲಿ ಮಹಿಳೆ ಸಾವು, ನಾಲ್ವರ ಸ್ಥಿತಿ ಚಿಂತಾಜನಕ

ತಿಪಟೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ತೊಡಗಿದ್ದ ವಾಹನ ಮತ್ತು ಕಾರು ನಡುವೆ ಮಂಗಳವಾರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.
ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ತಿಮ್ಲಾಪುರ ಗ್ರಾಮದ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ನೀರು ತುಂಬಿದ ಟ್ಯಾಂಕರ್ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮಹಿಳೆ ಶಶಿಕಲಾ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಲ್ಲೂಕಿನ ಸೂಗೂರು ಮತ್ತಿಘಟ್ಟ ಗ್ರಾಮದವರಾಗಿದ್ದು, ದೇವಾಲಯಕ್ಕೆ ತೆರಳಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.