ಗುರುವಾರ , ಸೆಪ್ಟೆಂಬರ್ 23, 2021
21 °C

ಹಂತಕರ ಬಂಧನಕ್ಕೆ ಆಗ್ರಹಿಸಿ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಚಿಕ್ಕಹಳ್ಳಿಯ ಹಿಂದುಳಿದ ವರ್ಗಗಳ ಮಹಿಳೆ ಮೇಲೆ ನಡೆದಿರುವ ಅತ್ಯಾಚಾರ, ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಜಿಲ್ಲಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಮೂರೇ ದಿನದಲ್ಲಿ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು ವಿಳಂಬ ಮಾಡಲಾಗುತ್ತಿದೆ. ಶೀಘ್ರ ಆರೋಪಿಗಳನ್ನು ಬಂಧಿಸಬೇಕು ಎಂದು ಮುಖಂಡರು ಈ ಸಂದರ್ಭದಲ್ಲಿ ಆಗ್ರಹಿಸಿದರು.

ಅತ್ಯಾಚಾರ ನಡೆದು ವಾರ ಕಳೆದರೂ ಆರೋಪಿಗಳನ್ನು ಪತ್ತೆ ಹಚ್ಚಿಲ್ಲ. ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳನ್ನು ಇಲ್ಲಿ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಚಿಕ್ಕಹಳ್ಳಿ ಮಹಿಳೆ ಕೊಲೆ, ಅತ್ಯಾಚಾರ ಘೋರ ಪ್ರಕರಣವಾಗಿದ್ದು, ಆರೋಪಿಗಳ ಬಂಧನಕ್ಕೆ ಆಗಿರುವ ವಿಳಂಬಕ್ಕೆ ಕಾರಣವನ್ನು ಸಾರ್ವಜನಿಕರಿಗೆ ತಿಳಿಸಬೇಕು. ಹಿಂದುಳಿದ ವರ್ಗಗಳ ಮಹಿಳೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಹಿಂದುಳಿದ ವರ್ಗಗಳ ಒಕ್ಕೂಟದ ಸಂಚಾಲಕರಾದ ಧನಿಯಾ ಕುಮಾರ್, ವಕೀಲ ನಾರಾಯಣಸ್ವಾಮಿ, ಕೆಂಪರಾಜು, ಪ್ರೆಸ್ ರಾಜಣ್ಣ, ಸುರೇಶ್, ಪ್ರದೇಶ ಕುರುಬರ ಸಂಘದ ನಿರ್ದೇಶಕ ಟಿ.ಇ.ರಘುರಾಮ್, ಗಂಗಹನುಮಯ್ಯ, ಮಯೂರ ಕಲಾ ಸಂಘದ ಅಧ್ಯಕ್ಷ ಪ್ರಸನ್ನ ಚಕ್ರವರ್ತಿ, ಪ್ರಕಾಶ್, ಗುರುಮೂರ್ತಿ, ಶಾಂತರಾಜು, ಮಂಜುನಾಥ್, ಟಿ.ಆರ್.ನಾಗೇಶ್, ಮಹದೇವ್ ಇತರರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.