ತುರುವೇಕೆರೆ: ಪಟ್ಟಣದ ತುರುವೇಕೆರೆ ಕೆರೆಗೆ ಹಾರಿ ತಾಲ್ಲೂಕಿನ ಕಸಬಾ ವ್ಯಾಪ್ತಿಯ ಗುಡ್ಡೇನಹಳ್ಳಿ ಗ್ರಾಮದ ಹೇಮಲತ (55) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರಿಗೆ ಮೂವರು ವಿವಾಹಿತ ಹೆಣ್ಣು ಮಕ್ಕಳಿದ್ದಾರೆ. ಎರಡು ದಿನಗಳ ಹಿಂದಷ್ಟೇ ಮುತ್ತಗದಹಳ್ಳಿಯ ಮಗಳ ಮನೆಗೆ ಬಂದಿದ್ದರು. ವಾಪಸ್ ಗ್ರಾಮಕ್ಕೆ ತೆರಳುವುದಾಗಿ ಮಗಳಿಗೆ ಹೇಳಿ ಹೋದವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೇಮಲತ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆನಾರೋಗ್ಯ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯರು ಕೆರೆಯಲ್ಲಿ ಮಹಿಳೆಯ ಶವ ತೇಲುತ್ತಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪಟ್ಟಣದ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರ ನೆರವಿನೊಂದಿಗೆ ಶವ ಹೊರತೆಗೆದಿದ್ದಾರೆ.