ಬುಧವಾರ, ಜನವರಿ 29, 2020
24 °C
ಮಹಿಳಾ ದನಿ

ತುಮಕೂರು | ಪೌರತ್ವ ಕಾಯ್ದೆ ವಿರೋಧಿಸಿ ಮಹಿಳೆಯರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಮತ್ತು ಪೌರತ್ವ ಕಾಯ್ದೆ ವಿರೋಧಿಸಿ ಜಿಲ್ಲೆಯ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದ ಸದಸ್ಯರು ನಗರದ ಟೌನ್‌ಹಾಲ್‌ ಎದುರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ವಿವಿಧೆಡೆಯಿಂದ ಸಾವಿರಾರು ಮಹಿಳೆಯರು ಪಾಲ್ಗೊಂಡಿದ್ದರು. ಮುಸ್ಲಿಂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದರು.

ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ಎಸ್.ವಿಮಲಾ,  ಎಐಎಂಎಸ್ಎಸ್ ರಾಜ್ಯ ಉಪಾಧ್ಯಕ್ಷೆ ಹರಿಣಿ ಆಚಾರ್ಯ, ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಮಹಿಳಾ ಮುಖಂಡರಾದ ಫರೀದಾ ಬೇಗಂ, ಶೀಮಾ, ಜೈನಬ್ ಮೊಹಮ್ಮದಿ ಮತ್ತಿತರರು ಪಾಲ್ಗೊಂಡಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು