ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: 7 ರಿಂದ ಮಹಿಳಾ ಚೆಸ್ ಪಂದ್ಯಾವಳಿ

Published 4 ಜೂನ್ 2024, 2:22 IST
Last Updated 4 ಜೂನ್ 2024, 2:22 IST
ಅಕ್ಷರ ಗಾತ್ರ

ತುಮಕೂರು: ನ್ಯೂ ತುಮಕೂರು ಜಿಲ್ಲಾ ಚೆಸ್ ಸಂಸ್ಥೆ, ತುಮಕೂರು ಚೆಸ್ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ಜೂನ್ 7ರಿಂದ 9ರ ವರೆಗೆ ಶ್ರೀದೇವಿ ವೈದ್ಯಕೀಯ ಕಾಲೇಜಿನಲ್ಲಿ ರಾಜ್ಯ ಮಟ್ಟದ ಮಹಿಳಾ ಚೆಸ್‌ ಪಂದ್ಯಾವಳಿ ಏರ್ಪಡಿಸಲಾಗಿದೆ.

ರಾಜ್ಯದ ಆಟಗಾರ್ತಿಯರಿಗೆ ಮಾತ್ರ ಅವಕಾಶವಿದೆ. 8 ವರ್ಷ, 10, 13, ಹಾಗೂ 15 ವರ್ಷದ ಒಳಗಿನ ವಿಭಾಗಗಳಲ್ಲಿ ಪ್ರತ್ಯೇಕ ಬಹುಮಾನ ನೀಡಲಾಗುತ್ತದೆ. ಮೊದಲ ನಾಲ್ಕು ಸ್ಥಾನ ಪಡೆದವರು ಚೆನ್ನೈನಲ್ಲಿ ನಡೆಯಲಿರುವ ರಾಷ್ಟ್ರೀಯ ಮಹಿಳಾ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ.

ಆಸಕ್ತರು ಜೂನ್ 5ರ ಒಳಗೆ www.circlechess.com ವೆಬ್‌ಸೈಟ್‌ ಮುಖಾಂತರ ನೋಂದಣಿ ಮಾಡಿಕೊಳ್ಳಬಹುದು. ಮಾಹಿತಿಗೆ ಪಂದ್ಯಾವಳಿಯ ಆಯೋಜಕಿ ಎನ್‌.ಮಾಧುರಿ ಮೊ 8050244338 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT