ತುಮಕೂರು: ಮಹಿಳಾ ಸಮಾನತೆ ಭಿಕ್ಷೆಯಲ್ಲ, ನಮ್ಮ ಹಕ್ಕು ಎಂದು ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಂಚಾಲಕಿ ಟಿ.ಆರ್.ಕಲ್ಪನಾ ಅಭಿಪ್ರಾಯಪಟ್ಟರು.

ನಗರದಲ್ಲಿ ಭಾನುವಾರ ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ಸಿಐಟಿಯು, ಜನವಾದಿ ಮಹಿಳಾ ಸಂಘಟನೆಯಿಂದ ಆಯೋಜಿಸಿದ್ದ ವಿಶ್ವ ದುಡಿಯುವ ಮಹಿಳೆಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶರಣ ಚಳವಳಿ, ಜ್ಯೋತಿ ಬಾ ಫುಲೆ, ಫಾತಿಮಾ ಶೇಖ್ ಅವರು ಭಾರತದಲ್ಲಿ ಮಹಿಳಾ ಸಮಾನತೆಗೆ ದುಡಿದವರು. ನಾವು ಅವರ ಸಂಘಟಿತ ಪ್ರಯತ್ನಗಳ ಮೂಲಕ ನಮ್ಮ ಹಕ್ಕು ಪಡೆಯಬೇಕು ಎಂದರು.

ಜಿಲ್ಲಾ ತಾಂತ್ರಿಕ ಸಂಸ್ಥೆಗಳ ಬೋಧಕೇತರ ನೌಕರರ ಸಂಘದ ಮೀನಾಕ್ಷಿ, ‘ತಾರತಮ್ಯಗಳ ವಿರುದ್ಧ ಮಹಿಳೆಯರು ಸಂಘಟಿತರಾಗಿ ಮುಂದೆ ಸಾಗಬೇಕು. ದುಡಿಯುವ ಮಹಿಳೆಯರ ಕಷ್ಟ ತಪ್ಪಿಲ್ಲ, ಒತ್ತಡಗಳು ಹೆಚ್ಚಿವೆ’ ಎಂದು ಹೇಳಿದರು.

ಕಟ್ಟಡ ಕಾರ್ಮಿಕರ ಸಂಘದ ರೇಣುಕಮ್ಮ, ‘ಅಸಂಘಟಿ ವಲಯದ ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಸಮಾನ ಕೂಲಿ ನೀಡಬೇಕು. ಕೆಲಸದ ಸ್ಥಳದಲ್ಲಿ ಸುರಕ್ಷತೆ, ಅಗತ್ಯ ಸೌಲಭ್ಯ ಒದಗಿಸುವಲ್ಲಿ ಇಂದಿಗೂ ಹಲವು ಸಮಸ್ಯೆಗಳಿವೆ. ವಲಸೆ ಕಾರ್ಮಿಕ ಮಹಿಳೆಯರ ಸ್ಥಿತಿ ಗಂಭೀರವಾಗಿದೆ. ಸರ್ಕಾರ ಇತ್ತ ಗಮನ ಹರಿಸಬೇಕು’ ಎಂದು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜಿಬ್, ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ವಿವಿಧ ಸಂಘಗಳ ಪದಾಧಿಕಾರಿಗಳಾದ ಪಲ್ಲವಿ, ಜ್ಯೋತಿ, ಕರಿಯಮ್ಮ, ಲಕ್ಷ್ಮಿ, ನಾಗರತ್ನ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.