ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

90 ಕಾರ್ಮಿಕರ ವಶಕ್ಕೆ ಪಡೆದ ಪೊಲೀಸರು

Last Updated 31 ಮಾರ್ಚ್ 2020, 15:13 IST
ಅಕ್ಷರ ಗಾತ್ರ

ಮಧುಗಿರಿ: ಆಂಧ್ರಪ್ರದೇಶ ಹಾಗೂ ಬಿಹಾರದ 90 ಕಾರ್ಮಿಕರು 4 ವಾಹನಗಳಲ್ಲಿ ರಾಯಚೂರಿಗೆ ತೆರಳುತ್ತಿದ್ದಾಗ ಮಧುಗಿರಿ ಪೊಲೀಸರು ಮಂಗಳವಾರ ಅವರನ್ನು ವಶಕ್ಕೆ ಪಡೆದಿದ್ದಾರೆ.

ಬೇಡತ್ತೂರು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಮಿಕರು ಈ ಹಿಂದೆ ಹಾಸನದಲ್ಲಿ ಇದ್ದರು.

ಉಪವಿಭಾಗಾಧಿಕಾರಿ ಡಾ.ಕೆ.ನಂದಿನಿ ದೇವಿ, ಬೇಡತ್ತೂರು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಲಾಕ್ ಡೌನ್ ಮುಗಿಯುವವರೆಗೂ ಯಾರು ಕೂಡ ತೆರಳುವಂತಿಲ್ಲ ಎಂದು ಸೂಚಿಸಿದ್ದಾರೆ.

ಆರೋಗ್ಯ ಇಲಾಖೆಯಿಂದ 90 ಮಂದಿಯ ಆರೋಗ್ಯ ತಪಾಸಣೆ ನಡೆಸಲಾಯಿತು. ತಹಶೀಲ್ದಾರ್ ಡಾ.ಜಿ.ವಿಶ್ವನಾಥ್ , ಡಿವೈಎಸ್‌ಪಿ ಎಂ.ಪ್ರವೀಣ್ , ಸಿಪಿಐ ಸರ್ದಾರ್, ಪಿಎಸ್‌ಐಗಳಾದ ಕಾಂತರಾಜು, ಪಾಲಾಕ್ಷ ಪ್ರಭು , ಹನುಮಂತರಾಯಪ್ಪ , ಗ್ರೇಡ್ 2 ತಹಶೀಲ್ದಾರ್ ನವೀನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT