ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರ ಸುರಕ್ಷತೆ ಹೊಣೆ ಮಾಲೀಕರದ್ದೇ

ಕಾರ್ಮಿಕ ದಿನಾಚರಣೆ; ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್
Last Updated 4 ಮೇ 2019, 1:29 IST
ಅಕ್ಷರ ಗಾತ್ರ

ತುಮಕೂರು: ‘ಕೈಗಾರಿಕೆಗಳು, ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮಾಲೀಕರು ಅಗತ್ಯ ಸುರಕ್ಷತೆಯನ್ನು ಒದಗಿಸಬೇಕು. ಸುರಕ್ಷತೆ ಒದಗಿಸುವುದು ಮಾಲೀಕರದ್ದೇ ಹೊಣೆ’ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಆಶ್ರಯದಲ್ಲಿ ಭೀಮಸಂದ್ರದ ಮೆ.ಶಾಹಿ ಎಕ್ಸ್‌ಪೋರ್ಟ್ಸ್ ಪ್ರೈವೆಟ್ ಲಿಮಿಟೆಡ್‌ ಏರ್ಪಡಿಸಿದ್ದ ‘ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು.

‘ಕಾರ್ಮಿಕರು ಈ ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಈ ನಿಟ್ಟಿನಲ್ಲಿ ಕಾರ್ಖಾನೆಗಳ ಮಾಲೀಕರು ಪ್ರತಿಯೊಬ್ಬ ಕಾರ್ಮಿಕರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು’ ಎಂದು ಸೂಚಿಸಿದರು.

ಕಾನೂನು ಸೇವಾ ಪ್ರಾಧಿಕಾರದ ಪ್ರಭಾರಿ ಸದಸ್ಯ ಕಾರ್ಯದರ್ಶಿ ಕೆ.ಎಸ್.ರೊಟ್ಟೇರ್ ಮಾತನಾಡಿ, ‘ಕಾರ್ಮಿಕರು ತಮ್ಮ ಹಕ್ಕುಗಳು ಹಾಗೂ ಕಾನೂನು ರೀತಿ ಬರಬೇಕಾದ ಸೌಲಭ್ಯಗಳ ಬಗ್ಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತವಾಗಿ ಕಾನೂನು ಸಲಹೆಗಳನ್ನು ಪಡೆದುಕೊಳ್ಳಬಹುದು’ ಎಂದು ತಿಳಿಸಿದರು.

ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿ ಎಂ.ಮಹದೇವಪ್ಪ ಮಾತನಾಡಿ, ‘ಸರಕು ಸಾಗಣೆ ವಾಹನಗಳಲ್ಲಿ ಕಾರ್ಮಿಕರು ಪ್ರಯಾಣಿಸಬಾರದು’ ಎಂದು ಹೇಳಿದರು.

ಕಾರ್ಮಿಕ ಅಧಿಕಾರಿ ಜಿ.ಟಿ ನಿರಂಜನ್ ಅವರು ಕಾರ್ಮಿಕರಿಗೆ ಒದಗಿಸಬೇಕಾದ ಕನಿಷ್ಠವೇತನ, ಉಪಧನ, ಬಾಲ ಕಾರ್ಮಿಕ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.

ಕಾರ್ಮಿಕ ನಿರೀಕ್ಷಕರಾದ ಜಯಪ್ರಕಾಶ್ ಹಾಗೂ ಭಾರತಿ, ಶಾಹಿ ಎಕ್ಸ್‌ಪೋರ್ಟ್‌ನ ಕಲ್ಯಾಣ ಅಧಿಕಾರಿ ಶ್ವೇತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT