ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇನಾಮಿ ಹೆಸರಲ್ಲಿ ಕಾಮಗಾರಿ: ಆರೋಪ

Last Updated 25 ಸೆಪ್ಟೆಂಬರ್ 2020, 2:03 IST
ಅಕ್ಷರ ಗಾತ್ರ

ಮಾಗಡಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೊನಿಗಳಲ್ಲಿ ಅಧಿಕಾರಿಗಳು ಬೇನಾಮಿ ಹೆಸರಿನಲ್ಲಿ ಕಾಮಗಾರಿ ನಡೆಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ತನಿಖೆ ನಡೆಸಬೇಕು ಎಂದು ತಾಲ್ಲೂಕು ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ನಾಯ್ಕ ಒತ್ತಾಯಿಸಿದ್ದಾರೆ.

ಗುರುವಾರ ತಾಲ್ಲೂಕು ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು,ಕೆಲವು ಕಾಲೊನಿಗಳಲ್ಲಿ ಕಾಮಗಾರಿ ನಡೆದಿಲ್ಲ ಎಂದು ಆರೋಪಿಸಿದರು.

ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಲಕ್ಷಾಂತರ ಸಸಿ ನೆಟ್ಟಿರುವುದಾಗಿ ಹೇಳಿ ಅವ್ಯವಹಾರ ನಡೆಸಿದ್ದಾರೆ. ತನಿಖೆ ನಡೆಸುವಂತೆತಾ.ಪಂ. ಸದಸ್ಯೆ ದಿವ್ಯಾರಾಣಿ ಚಂದ್ರಶೇಖರ್ ಒತ್ತಾಯಿಸಿದರು.

ಅದರಂಗಿ, ಕಾಗಿಮಡು ಗ್ರಾಮಪಂಚಾಯಿತಿ ವ್ಯಾಪ್ತಿ ಅರಣ್ಯದಲ್ಲಿ ನಿತ್ಯ ಕಾಡುಪ್ರಾಣಿಗಳು ಜನತೆಗೆ ಉಪಟಳ ನೀಡುತ್ತಿದ್ದು, ಮುಂದಿನ ಸಭೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅರಣ್ಯ ಅಧಿಕಾರಿಗಳನ್ನು ಕರೆಸಬೇಕು ಎಂದುತಾಲ್ಲೂಕು ಪಂಚಾಯಿತಿ ಸದಸ್ಯ ಎಂ.ಜಿ.ನರಸಿಂಹ ಮೂರ್ತಿ ಒತ್ತಾಯಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಪ್ರದೀಪ್,ತಾಲ್ಲೂಕು ವೈದ್ಯಾಧಿಕಾರಿ ಡಾ.ಸತೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಡಿ.ಬಿ.ನಾಗರಾಜು ಮಾತನಾಡಿದರು.

ಕೊರೊನಾ ಹಿನ್ನೆಲೆಯಲ್ಲಿ ಶೇ 60ರಷ್ಟು ಬಸ್ ಸಂಚಾರ ಆರಂಭವಾಗಿದೆ. ಶಾಲೆ, ಕಾಲೇಜು ಆರಂಭವಾದರೆ ಅಕ್ಟೋಬರ್ನಲ್ಲಿ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ವಿತರಿಸಲಾಗುವುದು ಎಂದು ರಾಜ್ಯ ರಸ್ತೆ ಸಾರಿಗೆ ಡಿಪೊ ಮ್ಯಾನೇಜರ್ ಬಿ.ಸಿ.ನಟರಾಜ ಹೇಳಿದರು.

ಸಿಡಿಪಿಒ ಸುರೇಂದ್ರ, ತಾ.ಪಂ.ಸದಸ್ಯೆ ಶಿವಮ್ಮ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಗಂಗಾಧರ್, ಲೆಕ್ಕಾಧಿಕಾರಿ ಮಂಗಳ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT