ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೌಢಶಾಲಾ ಗಣಿತ ಶಿಕ್ಷಕರ ಕಾರ್ಯಾಗಾರ

Last Updated 19 ಜನವರಿ 2023, 5:56 IST
ಅಕ್ಷರ ಗಾತ್ರ

ಶಿರಾ: ‘ಶಿಕ್ಷಕರ ಸಮಸ್ಯೆಗಳು ನನ್ನ ಗಮನದಲ್ಲಿದ್ದು ಹಂತ ಹಂತವಾಗಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು’ ಎಂದು ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿ ಹೇಳಿದರು.

ತಾಲ್ಲೂಕಿನ ಬ್ರಹ್ಮಸಂದ್ರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗಣಿತ ಶಿಕ್ಷಕರ ಸಂಘದಿಂದ ಪ್ರೌಢಶಾಲೆಯ ಗಣಿತ ಶಿಕ್ಷಕರಿಗೆ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಗಣಿತ ಶಿಕ್ಷಕರ ಪರಿಶ್ರಮ ಎಸ್ಸೆಸ್ಸೆಲ್ಸಿ ಫಲಿತಾಂಶದ ಮೇಲೆ‌ ಮಹತ್ವದ ಪರಿಣಾಮ ಬೀರಲಿದೆ. ಆದ್ದರಿಂದ ಜವಾಬ್ದಾರಿಯಿಂದ ಕೆಲಸ‌ ಮಾಡಬೇಕು ಎಂದರು.

ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಣಾಧಿಕಾರಿ ತಿಮ್ಮರಾಜು ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಿಸಲು ಅನುಸರಿಸಬೇಕಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯ ಪ್ರಭಾರ ಪ್ರಾಂಶುಪಾಲ ಡಾ.ಎಸ್.ಪಿ. ರಾಜಣ್ಣ ಮಾತನಾಡಿ, ಎಲ್ಲಾ ಪ್ರೌಢಶಾಲೆಗಳಲ್ಲಿ ಗಣಿತ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದರು.

ಕಾರ್ಯಾಗಾರದಲ್ಲಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಲಕ್ಷ್ಮೀಕಾಂತ್‍, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ನಾಗಭೂಷಣ್, ತಾಲ್ಲೂಕು ಪ್ರೌಢಶಾಲೆ ಗಣಿತ ಸಹಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಹಾಗೂ 60 ಸಹಶಿಕ್ಷಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT