ಬುಧವಾರ, ಆಗಸ್ಟ್ 4, 2021
20 °C

ಮರ ಕಡಿಯುವುದನ್ನು ನಿಲ್ಲಿಸಿ: ಶಾಸಕ ಎಸ್.ಆರ್.ಶ್ರೀನಿವಾಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಬ್ಬಿ: ‘ಅರಣ್ಯ ವ್ಯಾಪ್ತಿಯ ಗಡಿಭಾಗದ ಗ್ರಾಮಸ್ಥರು ಹಾಗೂ ರೈತರು ಮರಗಳನ್ನು ಕಡಿಯುವುದನ್ನು ನಿಲ್ಲಿಸಿ, ನೀವೇ ರಕ್ಷಣೆಯ ಕಾರ್ಯಕ್ಕೆ ಮುಂದಾಗಬೇಕು’ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ ಕೃಷಿ ಇಲಾಖೆ ಹಾಗೂ ಪಶು ಇಲಾಖೆಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಎಂದಿನಂತೆ ಪ್ರತಿವರ್ಷ ವಲಯ ಹಾಗೂ ಸಾಮಾಜಿಕ ಅರಣ್ಯ ಇಲಾಖೆಯಿಂದ 4 ಲಕ್ಷ ಸಸಿಗಳನ್ನು ನೀಡುತ್ತಿದ್ದು, ಅರಣ್ಯ ಪ್ರದೇಶ ಮಾತ್ರ ವಿಸ್ತರಣೆಯಾಗುತ್ತಿಲ್ಲ. ಅಭಿವೃದ್ಧಿ ಹೆಸರಲ್ಲಿ ಕಾಡನ್ನು ನಾಶ ಮಾಡಲಾಗುತ್ತಿದೆ. ಭವಿಷ್ಯದ ಪೀಳಿಗೆಯ ಹಿತದೃಷ್ಟಿಯಿಂದ ಮರಗಳನ್ನು ಬೆಳಸಬೇಕು ಎಂದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಡಾ.ಪ್ರದೀಪ್‍ಕುಮಾರ್, ಪಂಟ್ಟಣ ಪಂಚಾಯಿತಿ ಸದಸ್ಯರಾದ ಕುಮಾರ್, ರೇಣುಕಾ ಪ್ರಸಾದ್, ಶಿವಕುಮಾರ್, ಮಂಗಳಾಶಿವಪ್ಪ, ಇ.ಒ.ನರಸಿಂಹಯ್ಯ, ವಲಯ ಅರಣ್ಯಾಧಿಕಾರಿ ಸಿ.ರವಿ, ಸಾಮಾಜಿಕ ಅರಣ್ಯ ವಲಯ ಅಧಿಕಾರಿ ಜಿತೇಂದ್ರ, ಕೃಷಿ ಇಲಾಖೆಯ ನಿರ್ದೇಶಕ ಕೆಂಪಚೌಡಯ್ಯ, ಶಿವಣ್ಣ, ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು