ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವೀಯ ಮೌಲ್ಯಗಳು ಕಣ್ಮರೆ: ಜಿ.ಪಂ ಸಿಇಒ ಜಿ.ಪ್ರಭು

ವಿಶ್ವ ಹಿರಿಯ ನಾಗರಿಕರ ದಿನ ಆಚರಣೆ
Published 1 ಅಕ್ಟೋಬರ್ 2023, 13:30 IST
Last Updated 1 ಅಕ್ಟೋಬರ್ 2023, 13:30 IST
ಅಕ್ಷರ ಗಾತ್ರ

ತುಮಕೂರು: ಪ್ರಸ್ತುತ ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿವೆ. ತಮ್ಮ ಜತೆಗೆ ಇತರರ ಬದುಕಿಗೂ ಪೂರಕವಾದ ವಾತಾವರಣ ನಿರ್ಮಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಜಿ.ಪಂ ಸಿಇಒ ಜಿ.ಪ್ರಭು ಅಭಿಪ್ರಾಯಪಟ್ಟರು.

ನಗರದಲ್ಲಿ ಭಾನುವಾರ ಜಿಲ್ಲಾ ಆಡಳಿತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಇನ್ನರ್ ವ್ಹೀಲ್‌ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿರಿಯ ನಾಗರಿಕರಿಗಾಗಿ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು, ಎಲ್ಲರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಹಿರಿಯ ನಾಗರಿಕರಿಗೆ ಮನ್ನಣೆ ನೀಡುವ ಮೂಲಕ ಅವರ ಆತ್ಮ ವಿಶ್ವಾಸ ಹೆಚ್ಚಿಸಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ, ‘ಹಿರಿಯ ನಾಗರಿಕರು ಶಕ್ತಿ ಇದ್ದ ಸಮಯದಲ್ಲಿ ಗಳಿಸಿದ ಆದಾಯವನ್ನು ಕೊನೆಗಾಲದ ತನಕ ಉಳಿಸಿಕೊಳ್ಳಬೇಕು. ಆಸ್ತಿ ಆಸೆಯಿಂದಾದರೂ ಮಕ್ಕಳು, ಸಂಬಂಧಿಕರು ಸರಿಯಾದ ರೀತಿಯಲ್ಲಿ ನೋಡಿಕೊಳುತ್ತಾರೆ’ ಎಂದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಂ.ಎಸ್.ಶ್ರೀಧರ್‌, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಜಿಲ್ಲಾ ಕಲ್ಯಾಣಾಧಿಕಾರಿ ಎಂ.ರಮೇಶ್, ನಿವೃತ್ತ ನೌಕರರ ಸಂಘದ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಕಾರ್ಯದರ್ಶಿ ಎಂ.ಜಿ.ತಿಮ್ಮಾರೆಡ್ಡಿ, ಹಿರಿಯ ಸ್ವಾತಂತ್ರ ಹೋರಾಟಗಾರ ಟಿ.ಆರ್.ರೇವಣ್ಣ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT