ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧುಗಿರಿ: ದಂಡಿನ ಮಾರಮ್ಮಗೆ ಪೂಜೆ ಸಲ್ಲಿಕೆ

Last Updated 15 ಡಿಸೆಂಬರ್ 2021, 4:38 IST
ಅಕ್ಷರ ಗಾತ್ರ

ಮಧುಗಿರಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ರಾಜೇಂದ್ರ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಕೆ.ಎನ್. ರಾಜಣ್ಣ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಹಾಗೂ ಕಾರ್ಯಕರ್ತರೊಂದಿಗೆ ಮಂಗಳವಾರ ರಾತ್ರಿ ‌ಪಟ್ಟಣದ ದಂಡಿನ ಮಾರಮ್ಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಗೆಲುವೇ ಕಾಂಗ್ರೆಸ್ ಕಾರ್ಯಕರ್ತರ ಗೆಲುವು ಎಂದರು.

ಜಿಲ್ಲೆಯ ಎಲ್ಲಾ ಮುಖಂಡರು ಒಗ್ಗಟ್ಟು ಹಾಗೂ ಮತದಾರರ ಆಶೀರ್ವಾದದಿಂದ ಗೆಲುವು ಸಾಧ್ಯವಾಗಿದೆ ಎಂದು
ತಿಳಿಸಿದರು.

ಶಾಸಕ ಡಾ.ಜಿ. ಪರಮೇಶ್ವರ, ಮಾಜಿ ಸಚಿವ ಟಿ.ಬಿ. ಜಯಚಂದ್ರ ಹಾಗೂ ಮಾಜಿ ಶಾಸಕ ಕೆ.ಎನ್. ರಾಜಣ್ಣ ಸೇರಿದಂತೆ ಅನೇಕ ಮುಖಂಡರ ಸಹಕಾರದಿಂದ ಜಯಭೇರಿ ಸಾಧ್ಯವಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡಿ 9 ಶಾಸಕರನ್ನು ಆಯ್ಕೆ ಮಾಡಲು ಶ್ರಮಿಸಲಾಗುವುದು ಎಂದು ತಿಳಿಸಿದರು.

ಮಧುಗಿರಿ ಕ್ಷೇತ್ರದಲ್ಲಿ ಮಾಜಿ ಶಾಸಕ ರಾಜಣ್ಣ ಅವರನ್ನು ಗೆಲ್ಲಿಸಬೇಕೆಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಪ್ರತಿ ಗ್ರಾ.ಪಂ. ಭೇಟಿ ಮಾಡಿ ಸದಸ್ಯರ ಸಮಸ್ಯೆಗಳನ್ನು ಆಲಿಸಿ, ಹೆಚ್ಚಿನ ಅನುದಾನ ತಂದು ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಜಿ.ಪಂ. ಮಾಜಿ ಸದಸ್ಯೆ ಶಾಂತಲಾ ರಾಜಣ್ಣ, ರಾಜ್ಯ ಸಹಕಾರ ಮಹಾಮಂಡಳದ ಮಾಜಿ ಅಧ್ಯಕ್ಷ ಎನ್. ಗಂಗಣ್ಣ, ತಾ.ಪಂ. ಮಾಜಿ ಅಧ್ಯಕ್ಷೆ ಇಂದಿರಾ ದೇನಾನಾಯ್ಕ್, ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ. ರಾಜಣ್ಣ, ನಿರ್ದೇಶಕ ವಿ.ನಾಗೇಶ್ ಬಾಬು, ಪುರಸಭೆ ಅಧ್ಯಕ್ಷ ತಿಮ್ಮರಾಜು, ಮಾಜಿ ಅಧ್ಯಕ್ಷರಾದ ಎಂ.ಕೆ. ನಂಜುಂಡಯ್ಯ, ಎಂ.ವಿ. ಗೋವಿಂದರಾಜು, ಸದಸ್ಯರಾದ ಎಂ.ಎಸ್ .ಚಂದ್ರಶೇಖರ್, ಅಲೀಂ, ನಟರಾಜು, ಪುಟ್ಟಮ್ಮ, ಲಾಲಪೇಟೆ ಮಂಜುನಾಥ್, ಎಂ.ವಿ. ಮಂಜುನಾಥ್ ಅಚಾರ್, ಪಾರ್ವತಮ್ಮ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರಾದ ಎಂ.ಎಸ್. ಮಲ್ಲಿಕಾರ್ಜುನಯ್ಯ, ಎಸ್.ಆರ್. ರಾಜಗೋಪಾಲ್, ಮುಖಂಡರಾದ ಸುವರ್ಣಮ್ಮ, ವಿ.ಆರ್. ಭಾಸ್ಕರ್, ಸಾದಿಕ್, ಎಚ್.ಸಿ. ಬೈರಪ್ಪ, ಆದಿನಾರಾಯಣರೆಡ್ಡಿ, ಗೋಪಾಲಯ್ಯ, ನರಸಿಂಹರೆಡ್ಡಿ, ತಿಮ್ಮಾರೆಡ್ಡಿ, ಏಕಾಶಿಲಾ ಎಂ. ಕಂಬಣ್ಣ ಹಾಗೂ ಗ್ರಾ.ಪಂ. ಸದಸ್ಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT