ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿ.ಎಚ್‌ ಕಾಲೊನಿ ಸೀಲ್‍ಡೌನ್ ತೆರವಿಗೆ ಆಗ್ರಹ

Last Updated 8 ಮೇ 2020, 14:43 IST
ಅಕ್ಷರ ಗಾತ್ರ

ತುಮಕೂರು: ನಗರದ ಪಿ.ಎಚ್.ಕಾಲೊನಿ, ಹೌಸಿಂಗ್ ಬೋರ್ಡ್‌ನಲ್ಲಿ ಸೀಲ್‍ಡೌನ್ ತೆರವುಗೊಳಿಸಬೇಕು. ನಾಗರಿಕರಿಗೆ ಅಗತ್ಯ ಸೌಲಭ್ಯಗಳನ್ನು ನೀಡಬೇಕು ಎಂದು ಕಾಂಗ್ರೆಸ್ ಮುಖಂಡರಾದ ಡಾ.ರಫೀಕ್ ಅಹಮದ್, ಷಫಿ ಅಹಮದ್ ಅವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ರಫೀಕ್ ಅಹಮದ್, ‘ಪಿ.ಎಚ್.ಕಾಲೊನಿಯ ಒಂದು ಭಾಗವನ್ನು ಸೀಲ್‍ಡೌನ್‌ ಮಾಡಿ 14 ದಿನಗಳು ಕಳೆದಿವೆ. ಗುಜರಾತ್‌ನ ಒಬ್ಬ ವ್ಯಕ್ತಿಗೆ ಕೊರೊನಾ ಸೋಂಕು ಪತ್ತೆಯಾಗಿರುವುದು ಬಿಟ್ಟರೆ ಈ ಪ್ರದೇಶದಲ್ಲಿ ವಾಸವಿರುವ ಯಾವುದೇ ವ್ಯಕ್ತಿಯಲ್ಲಿ ಸೋಂಕು ಕಂಡುಬಂದಿಲ್ಲ. ಇಲ್ಲಿ ಹಿಂದುಳಿದವರು, ಕಡುಬಡವರು ವಾಸಿಸುತ್ತಿದ್ದಾರೆ. ಬಹುತೇಕ ದಿನಗೂಲಿ ಕಾರ್ಮಿಕರು ಇದ್ದಾರೆ. ಇವರ ಆರ್ಥಿಕ ಪರಿಸ್ಥಿತಿಯೂ ಕೂಡ ಶೋಚನೀಯವಾಗಿದೆ’ ಎಂದು ಹೇಳಿದರು.

ಸರ್ಕಾರ ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸಿಲ್ಲ. ಪ್ರತಿನಿತ್ಯ ಅಗತ್ಯವಿರುವ ಹಾಲು, ತರಕಾರಿ, ಆಹಾರ ಸಾಮಗ್ರಿ, ಔಷಧಿಗಳನ್ನು ಖರೀದಿಸಲು ಜನರಿಗೆ ಸಾಧ್ಯವಾಗುತ್ತಿಲ್ಲ ಎಂದರು.

ಕೆಲ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಸ್ವಲ್ಪಮಟ್ಟಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿದ್ದರೂ ಸೀಲ್‌ಡೌನ್ ಅವಧಿ ಮುಗಿಯುವವರೆಗೆ ಇದು ಸಾಕಾಗುವುದಿಲ್ಲ. 14 ದಿನಗಳಿಂದ ಈ ಭಾಗದಲ್ಲಿ ಯಾವುದೇ ಹೊಸ ಪ್ರಕರಣ ದಾಖಲಾಗದೆ ಇರುವುದರಿಂದ ಸೀಲ್‌ಡೌನ್ ಸೀಮಿತಗೊಳಿಸಿರುವ ಅವಧಿಯನ್ನು ಕಡಿತಗೊಳಿಸಬೇಕು. ಜನರು ತಮ್ಮ ಕೆಲಸಗಳಿಗೆ ಹೋಗಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT