ಗುರುವಾರ , ನವೆಂಬರ್ 26, 2020
21 °C

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ 2019ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ನಗರದ ಕನ್ನಡ ಭವನದಲ್ಲಿ ಬುಧವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು

ಪ್ರಶಸ್ತಿಗೆ ಆಯ್ಕೆಯಾದವರಿಗೆ ಆಯಾ ಭಾಗದಲ್ಲೇ ಪ್ರಶಸ್ತಿ ವಿತರಣೆ ಮಾಡಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ ಕಲಾವಿದರಿಗೆ ಪ್ರಶಸ್ತಿ ನೀಡಲಾಯಿತು.

ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತರಾದ ಡಾ.ಆನಂದರಾಮ ಉಪಾಧ್ಯ (ಬೆಂಗಳೂರು), ಕೆ.ಸಿ.ನಾರಾಯಣ (ಬೆಂಗಳೂರು ಗ್ರಾಮಾಂತರ), ಚಂದ್ರು ಕಾಳೇನಹಳ್ಳಿ (ಚನ್ನರಾಯಪಟ್ಟಣ), ಯಕ್ಷ ಸಿರಿ ವಾರ್ಷಿಕ ಪ್ರಶಸ್ತಿ ಪುರಸ್ಕೃತರಾದ ಮುಖವೀಣೆ ರಾಜಣ್ಣ, ಎ.ಜಿ.ಅಶ್ವಥನಾರಾಯಣ (ತುಮಕೂರು), ಪುಸ್ತಕ ಬಹುಮಾನ ಪುರಸ್ಕೃತರಾದ ಡಾ.ಚಿಕ್ಕಣ್ಣ ಯಣ್ಣೆಕಟ್ಟೆ (ಚಿತ್ರದುರ್ಗ) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್.ರಂಗಪ್ಪ, ಸಾಹಿತಿ ಬಾ.ಹ.ರಮಾಕುಮಾರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.