ಕಾಂಗ್ರೆಸ್ ಒಳ ಜಗಳಕ್ಕೂ ಬಿಜೆಪಿಗೂ ಸಂಬಂಧವಿಲ್ಲ: ಯಡಿಯೂರಪ್ಪ

7

ಕಾಂಗ್ರೆಸ್ ಒಳ ಜಗಳಕ್ಕೂ ಬಿಜೆಪಿಗೂ ಸಂಬಂಧವಿಲ್ಲ: ಯಡಿಯೂರಪ್ಪ

Published:
Updated:
Deccan Herald

ತುಮಕೂರು: 'ಕಾಂಗ್ರೆಸ್ ಒಳಜಗಳಕ್ಕೂ ಬಿಜೆಪಿಗೂ ಸಂಬಂಧವಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಭಾನುವಾರ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

’ಜಾರಕಿಹೊಳಿ ಸಹೋದರರು ಬಿಜೆಪಿ ಸೇರುತ್ತಾರೆ ಎಂಬುದರ ಬಗ್ಗೆ ಈವರೆಗೂ ನಾನು ಒಂದು ಶಬ್ದವನ್ನು ಮಾತನಾಡಿಲ್ಲ. ಕಾಂಗ್ರೆಸ್ಸಿನವರ ಆಂತರಿಕ ವಿಚಾರಕ್ಕೂ ನಮಗೂ ಏನು ಸಂಬಂಧ’ ಎಂದು ಪ್ರಶ್ನಿಸಿದರು.

’ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ ಮಾಡುತ್ತೇನೆ ಎಂದು ಸುಳ್ಳು ಭರವಸೆ ನೀಡಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಕೀಯ ದೊಂಬರಾಟ ಆಡುತ್ತಿದ್ದಾರೆ. ನಾಲ್ಕು ಕಂತಿನಲ್ಲಿ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದರೆ ಯಾವ ಬ್ಯಾಂಕಿನವರು ಕಾಯುತ್ತಾರೆ? ಈಗಾಗಲೇ ಬ್ಯಾಂಕಿನವರು ರೈತರಿಗೆ ನೋಟೀಸ್ ಕೊಡುತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಬರ ಆವರಿಸಿದೆ. ರೈತರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದರು.

’ಮೀಟರ್ ಬಡ್ಡಿ ದಂಧೆಕೋರರು, ರಿಯಲ್ ಎಸ್ಟೇಟ್ ಲಾಬಿ ಇದ್ದರೆ ಕುಮಾರಸ್ವಾಮಿ ನಿಯಂತ್ರಿಸಲಿ. ಅವರದ್ದೇ ಸರ್ಕಾರವಿದೆ. ಕ್ರಮ ಕೈಗೊಳ್ಳಲಿ. ನಾವ್ಯಾರೂ ಅವರನ್ನು ರಕ್ಷಣೆ ಮಾಡಿ ಎಂದು ಕೇಳಿಲ್ಲ. ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ಕುಮಾರಸ್ವಾಮಿ ನಿಲ್ಲಿಸಲಿ’ ಎಂದು ಎಚ್ಚರಿಕೆ ನೀಡಿದರು.

’ಈ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಜನಹಿತ, ರೈತರ ಹಿತ ಕಡೆಗಣಿಸಿದೆ’ ಎಂದು ಆರೋಪಿಸಿದರು.

ಬರಹ ಇಷ್ಟವಾಯಿತೆ?

 • 8

  Happy
 • 0

  Amused
 • 0

  Sad
 • 1

  Frustrated
 • 4

  Angry

Comments:

0 comments

Write the first review for this !