ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

Published 22 ನವೆಂಬರ್ 2023, 14:51 IST
Last Updated 22 ನವೆಂಬರ್ 2023, 14:51 IST
ಅಕ್ಷರ ಗಾತ್ರ

ತುಮಕೂರು: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಮನನೊಂದು ನಗರದ ದೇವರಾಯಪಟ್ಟಣದಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಮಲೇಶ್‌ (36) ಆತ್ಮಹತ್ಯೆ ಮಾಡಿಕೊಂಡ ಯುವಕ. ನವೆಂಬರ್‌ 17ರಂದು ವಿಷ ಸೇವಿಸಿದ್ದರು, ಮಂಗಳವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನ.21 ಮತ್ತು 22ರಂದು ವಿವಾಹ ನಡೆಯಬೇಕಿತ್ತು. ಮದುವೆಗೆ ಒಂದು ದಿನ ಬಾಕಿ ಇರುವಾಗಲೇ ಮೃತಪಟ್ಟಿದ್ದಾರೆ.

ಮೂರು ತಿಂಗಳ ಹಿಂದೆ ವಿವಾಹ ನಿಶ್ಚಯವಾಗಿತ್ತು. ನಿಶ್ಚಿತಾರ್ಥದ ಸಮಯದಲ್ಲಿ ನೀಡಿದ್ದ ಉಂಗುರ ಕಳೆದುಕೊಂಡಿದ್ದರು. ಇದನ್ನು ಮನೆಯವರಿಗೆ ತಿಳಿಸಲು ಹೆದರಿ ವಿಷ ಸೇವಿಸಿದ್ದರು. ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT