ವಿಶ್ವನಾಥ್ ಶಿವಮೊಗ್ಗ ಜಿಲ್ಲೆಯವರು. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ದೊರೆತ ವಿಸಿಟಿಂಗ್ ಕಾರ್ಡ್ ಮೂಲಕ ಅವರ ವಿಳಾಸ ಪತ್ತೆ ಹಚ್ಚಲಾಗಿದೆ. ಇಲ್ಲಿಗೆ ಏಕೆ ಬಂದಿದ್ದರು, ಆತ್ಮಹತ್ಯೆಗೆ ಏನು ಕಾರಣ ಎಂಬುವುದು ಇನ್ನೂ ತಿಳಿದು ಬಂದಿಲ್ಲ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗತ್ಯ ಮಾಹಿತಿ ಕಲೆ ಹಾಕಲು ತನಿಖೆ ಮುಂದುವರಿಸಿದ್ದಾರೆ.