ಯುವಜನರು ಸಮಯ ವ್ಯರ್ಥ ಮಾಡದಿರಿ

7
ಉದ್ಯೋಗ ಮೇಳ: ನೋಂದಣಿ ಕಾರ್ಯಕ್ಕೆ ಶಾರದಾ ನರಸಿಂಹಮೂರ್ತಿ ಸಾಂಕೇತಿಕವಾಗಿ ಚಾಲನೆ

ಯುವಜನರು ಸಮಯ ವ್ಯರ್ಥ ಮಾಡದಿರಿ

Published:
Updated:
Prajavani

ತುಮಕೂರು: ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಸರ್ಕಾರವು ಕೌಶಲಾಭಿವೃದ್ಧಿ ಯೋಜನೆಯಡಿ ಫೆ.16 ಮತ್ತು 17 ರಂದು ನಗರದಲ್ಲಿ ಉದ್ಯೋಗ ಮೇಳ ಏರ್ಪಡಿಸಿದ್ದು ಉದ್ಯೋಗಾಕಾಂಕ್ಷಿಗಳು ಸದುಪಯೋಗ‍ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ತಿಳಿಸಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಏರ್ಪಡಿಸಿದ್ದ ನೋಂದಣಿ ಮತ್ತು ತರಬೇತಿ ಕಾರ್ಯಕ್ರಮದಲ್ಲಿ ನೋಂದಣಿ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಉಪವಿಭಾಗಾಧಿಕಾರಿ ಶಿವಕುಮಾರ್, ‘ವಿದ್ಯಾಭ್ಯಾಸ ಮುಗಿಸಿ ಎಲ್ಲರಿಗೂ ಸರ್ಕಾರಿ ನೌಕರಿ ದೊರೆಯಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಿಕೊಡುವ ದೃಷ್ಟಿಯಿಂದ ಸರ್ಕಾರವು ಕೌಶಲಾಭಿವೃದ್ಧಿ ಇಲಾಖೆಯನ್ನು ಸೃಷ್ಟಿಸಿದೆ’ ಎಂದರು.

ಅಭ್ಯರ್ಥಿಗಳು ಉದ್ಯೋಗಮೇಳದಲ್ಲಿ ಆಸಕ್ತಿಯಿಂದ ಭಾಗವಹಿಸಿ ಆನ್‌ಲೈನ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.

 ಕಾಲೇಜಿನ ಪ್ರಾಂಶುಪಾಲ ಪ್ರೊ.ಜಗದೀಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶ್, ತಹಶೀಲ್ದಾರ್ ಕೆ.ಆರ್.ನಾಗರಾಜ್, ಕೌಶಲಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವೇಶ್ವರಯ್ಯ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲು ಗಂಗಾಧರಯ್ಯ, ಮಂಜುನಾಥ್, ಉದ್ಯೋಗ ವಿನಿಮಯ ಕಚೇರಿಯ ನಾಗರಾಜ್ ಇದ್ದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !