ಮಂಗಳವಾರ, ಅಕ್ಟೋಬರ್ 20, 2020
21 °C

ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಸೋಪನಹಳ್ಳಿ ಗ್ರಾಮದ ದೇವಿಕಾ (17) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೇವಿಕಾ ತುಮಕೂರಿನ ಸಿದ್ದಗಂಗಾ ಕಾಲೇಜಿನ ದ್ವಿತೀಯ ಪಿಯುಸಿ ಓದುತ್ತಿದ್ದರು. ಸದ್ಯ  ಕಾಲೇಜಿಗೆ ರಜೆ ಇರುವುದರಿಂದ ಮನೆಯಲ್ಲಿ ಇದ್ದರು.

ಗ್ರಾಮದಲ್ಲಿ ತಂದೆ ಹಾಗೂ ದಾಯಾದಿಗಳ ನಡುವೆ ಜಮೀನು ವಿಚಾರವಾಗಿ ಕೆಲ ದಿನಗಳಿಂದ ಗಲಾಟೆ ನಡೆದಿತ್ತು. ಈ ಬಗ್ಗೆ ದೇವಿಕಾಳ ಪೋಷಕರು ಪಟ್ಟಣದ ಠಾಣೆಗೆ ದೂರು ನೀಡಲು ತೆರಳಿದ್ದ ವೇಳೆ ದೇವಿಕಾ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪಟ್ಟಣದ ಪೊಲೀಸರು ತಿಳಿಸಿದರು.

ಜಮೀನು ಗಲಾಟೆ ವಿಷಯವಾಗಿ ಪೊಲೀಸರಿಗೆ ದೂರು ನೀಡಿದ್ದರೂ, ಕ್ರಮ ಕೈಗೊಂಡಿಲ್ಲ. ಪೊಲೀಸರು ಸಕಾಲಕ್ಕೆ ಗಲಾಟೆ ಇತ್ಯರ್ಥ ಮಾಡಿದ್ದರೆ, ಮಗಳು ಹೀಗೆ ಸಾಯುತ್ತಿರಲಿಲ್ಲ ಎಂದು ದೇವಿಕಾ ಪೋಷಕರು ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.