ಗುರುವಾರ , ಸೆಪ್ಟೆಂಬರ್ 24, 2020
20 °C

ಅಪಘಾತದಲ್ಲಿ ಯುವತಿ ಸಾವು: ಆಸ್ಪತ್ರೆ ಪೀಠೋಪಕರಣ ಧ್ವಂಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಳಿಯಾರು: ಸಮೀಪದ ಮತಿಘಟ್ಟ ಗ್ರಾಮದ ಗಾಂಧಿನಗರದ ಬಳಿ ಸೋಮವಾರ ರಸ್ತೆ ಅಪಘಾತದಲ್ಲಿ ಬಿಳಗಿಹಳ್ಳಿಯ ಯುವತಿ ಸೌಮ್ಯಾ (23) ಮೃತಪಟ್ಟಿದ್ದಾರೆ.

ದ್ವಿಚಕ್ರ ವಾಹನದಲ್ಲಿ ತಿಪಟೂರಿನಿಂದ ಸ್ವಗ್ರಾಮಕ್ಕೆ ಹಿಂದಿರುವಾಗ ತಿಪಟೂರು- ಹುಳಿಯಾರು ಮುಖ್ಯರಸ್ತೆಯ ಗಾಂಧಿನಗರದ ಬಳಿ ಅಪರಿಚಿತ ವಾಹನಕ್ಕೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾರೆ. ದಾರಿಹೋಕರು ಕೂಡಲೇ ಮತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರು. ಆಸ್ಪತ್ರೆ ಸಿಬ್ಬಂದಿ ಮೃತಪಟ್ಟಿರುವುದನ್ನು ದೃಢಪಡಿಸಿದರು.

ಇದೇ 5ರಂದು ಯುವತಿಯ ಮದುವೆ ನಿಶ್ಚಯವಾಗಿತ್ತು. ಸ್ಥಳಕ್ಕೆ ಹಂದನಕೆರೆ ಪಿಎಸ್‌ಐ ಯೋಗೀಶ್‌ ಭೇಟಿ ನೀಡಿದ್ದರು.

ಆಸ್ಪತ್ರೆ ಪೀಠೋಪಕರಣ ದ್ವಂಸ: ‘ಯುವತಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದ್ದರೆ ಸಾವು ಸಂಭವಿಸುತ್ತಿರಲಿಲ್ಲ. ಮತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದಿರುವುದರಿಂದ ಸಾವು ಸಂಭವಿಸಿದೆ. ಇದಕ್ಕೆಲ್ಲ ಆರೋಗ್ಯ ಇಲಾಖೆಯವರೇ ಹೊಣೆ’ ಎಂದು ಯುವತಿಯ ಸಂಬಂಧಿಕರು ಆಸ್ಪತ್ರೆಗೆ ನುಗ್ಗಿ ಪೀಠೋಪಕರಣಗಳನ್ನು ದ್ವಂಸ ಮಾಡಿದರು.

ಸ್ಥಳಕ್ಕೆ ಬಂದ ಪ್ರಭಾರ ವೈದ್ಯೆ ಹಿಮಶ್ವೇತಾ ಆಸ್ಪತ್ರೆಯ ಸಿಸಿಟಿವಿ ಫುಟೇಜ್‌ಗಳನ್ನು ಆಧರಿಸಿ ಠಾಣೆಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು