ಶನಿವಾರ, ಜೂಲೈ 4, 2020
24 °C

ಚಾಕುವಿನಿಂದ ಹೊಟ್ಟೆಗೆ ಚುಚ್ಚಿ ಯುವಕನ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರಟಗೆರೆ: ಅನೈತಿಕ ಸಂಬಂಧದ ಶಂಕೆಯಿಂದ ಕಾರು ಚಾಲಕನ ಹೊಟ್ಟೆಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಸೋಮವಾರ ಮಧ್ಯರಾತ್ರಿ ನಡೆದಿದೆ. ಕೊರಟಗೆರೆ ತಾಲ್ಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇಶಪುರ ಗ್ರಾಮದ ಹನುಮಂತರಾಯಪ್ಪನ ಮಗ ಗಿರೀಶ್ ಕೊಲೆಯಾದ ಯುವಕ.

ಬೆಂಗಳೂರು ನಗರದಲ್ಲಿ ಕಾರು ಚಾಲಕನಾಗಿದ್ದ ಮೃತ ಗಿರೀಶ್, ಕೊರೊನಾ ಲಾಕ್‌ಡೌನ್‌ನಿಂದ ಕಳೆದ 20 ದಿನದ ಹಿಂದೆ ಸ್ವಗ್ರಾಮ ಮಲ್ಲೇಶಪುರಕ್ಕೆ ಆಗಮಿಸಿದ್ದ. ಮಲ್ಲೇಶಪುರದ ನಂಜುಂಡಪ್ಪನ‌ ಮಗ ನಟರಾಜು ಮತ್ತು ಗಿರೀಶ್ ನಡುವೆ ಕುಡಿದ ಅಮಲಿನಲ್ಲಿ ಅನೈತಿಕ ಸಂಬಂಧ ವಿಚಾರಕ್ಕೆ ಗಲಾಟೆ ನಡೆದಿದ್ದು, ಕೊಲೆಯಲ್ಲಿ ಅಂತ್ಯಕಂಡಿದೆ.

ತುಮಕೂರು ಎಸ್ಪಿ ಡಾ.ಕೆ.ವಂಶಿಕೃಷ್ಣ, ಮಧುಗಿರಿ ಡಿವೈಎಸ್ಪಿ ಧರಣೀಶ್, ಕೊರಟಗೆರೆ ಸಿಪಿಐ ನಧಾಪ್, ಪಿಎಸ್‌ಐ ಮುತ್ತುರಾಜು ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು