ಗುರುವಾರ , ಮಾರ್ಚ್ 23, 2023
28 °C

ತಿಪಟೂರು: ಕುಡಿದ ಅಮಲಿನಲ್ಲಿ ಗ್ಯಾಸ್‌ಗೆ ಬೆಂಕಿ, ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿಪಟೂರು (ತುಮಕೂರು): ಕುಡಿದ ಅಮಲಿನಲ್ಲಿ ಯುವಕನೊಬ್ಬ ಗ್ಯಾಸ್‌ಗೆ ಬೆಂಕಿ ಹಚ್ಚಿ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕು ಹೊನ್ನವಳ್ಳಿ ಹೋಬಳಿ ಆದಿನಾಯಕನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ.

ಧ್ರುವರಾಜ್ (32) ಮೃತ ಯುವಕ. ಸೋಮವಾರ ರಾತ್ರಿ 8 ಗಂಟೆ ಸಮಯದಲ್ಲಿ ತೋಟದ ಮನೆಯಲ್ಲಿ ತಂಗಿದ್ದ ಯುವಕ ಕುಡಿದ ಅಮಲಿನಲ್ಲಿ ಮನೆಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್ ಪೈಪ್ ತೆಗೆದು ದಬ್ಬಳದಿಂದ ಚುಚ್ಚಿ ಗ್ಯಾಸ್ ಹೊರಬಿಟ್ಟು ಬೆಂಕಿಹಚ್ಚಿಕೊಂಡಿದ್ದಾನೆ.

ತೋಟದ ಮನೆಯಲ್ಲಿ ಧೃವರಾಜ್‌ನೊಂದಿಗೆ ತಾಯಿ ಜಯಮ್ಮ ವಾಸವಿದ್ದರು. ತಾಯಿ ತೋಟದ ಮನೆಯಿಂದ ಊರೊಳಗೆ ಹೋಗಿರುವ ವೇಳೆ ಈ ಘಟನೆ ನಡೆದಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ಆರಿಸುವಷ್ಟರಲ್ಲಿ ಧೃವರಾಜ್ ಮೃತಪಟ್ಟು, ಮನೆ ಸಂಪೂರ್ಣವಾಗಿ ಸುಟ್ಟು ಹೋಗಿದೆ.

ಹೊನ್ನವಳ್ಳಿ ಸಬ್ ಇನ್‌ಸ್ಪೆಕ್ಟರ್ ಶಂಕರಪ್ಪ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು