ಶುಕ್ರವಾರ, ಜೂನ್ 25, 2021
30 °C

ನೇಣಿಗೆ ಯುವಕ ಶರಣು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಕುವೆಂಪು ನಗರದ ಎಸ್‌ಬಿಎಂ ಕಾಲೊನಿಯ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೆಸರೆ ನಿವಾಸಿ ಶಿವಪ್ರಸಾದ್‌ (24) ಆತ್ಮಹತ್ಯೆಗೆ ಶರಣಾದ ಯುವಕ.

ಈತ ಬಿಬಿಎಂ ಮುಗಿಸಿದ ಬಳಿಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಕೊರೊನಾ ವೈರಸ್‌ನ ಭೀತಿಯಿಂದ ಮನೆಯಲ್ಲೇ ಕೆಲಸ ನಿರ್ವಹಿಸುತ್ತಿದ್ದ. ʻಜೀವನದಲ್ಲಿ ನಾನು ಬಯಸಿದ ಲೈಫ್‌ ಸಿಗಲಿಲ್ಲʼ ಎಂದು ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದು ತಿಳಿದು ಬಂದಿದೆ.

ಕುವೆಂಪು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.