ತುಮಕೂರು: ನಗರದಲ್ಲಿ ಭಾನುವಾರ ಸಂಜೆ ಯುವ ದಸರಾಗೆ ಚಾಲನೆ ದೊರೆಯಿತು. ಅ. 10ರ ವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ.

ಅ. 12ರಂದು ವಿಜಯದಶಮಿ ದಿನ ನಡೆಯುವ ಜಂಬೂ ಸವಾರಿ ಕಾರ್ಯಕ್ರಮದ ಪೂರ್ವ ತಾಲೀಮು ವೈಭವಯುತವಾಗಿ ಜರುಗಿತು. ಬಿಜಿಎಸ್ ವೃತ್ತದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಲಕ್ಷ್ಮಿ ಆನೆಗಳು ಗಾಂಭೀರ್ಯದೊಂದಿಗೆ ಹೆಜ್ಜೆ ಹಾಕಿದವು. ಚಿಟ್ಟಿ ಮೇಳ, ಗಿಳಿ ಕುಣಿತ, ನಂದಿ ಧ್ವಜ ಕುಣಿತ, ನಾಸಿಕ್ ಡೋಲ್ ಇತರೆ ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನಡೆದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಪ್ರತಿಭೆಗಳ ಅನಾವರಣಕ್ಕೆ ಯುವ ಸಂಭ್ರಮ ಉತ್ತಮ ವೇದಿಕೆಯಾಗಿದೆ. ದೇಶದಲ್ಲಿ ಯುವಕರ ಸಂಖ್ಯೆ ಹೆಚ್ಚಿದ್ದು, ಅವರಿಗೆ ನಮ್ಮ ಕಲೆ, ಸಂಸ್ಕೃತಿ, ಸಂಪ್ರದಾಯ ತಿಳಿಸುವ ಮೂಲಕ ಅವರನ್ನು ಸರಿದಾರಿಯಲ್ಲಿ ನಡೆಸುವುದು ನಮ್ಮ ಜವಾಬ್ದಾರಿ’ ಎಂದು ತಿಳಿಸಿದರು.

ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಎಚ್.ವಿ.ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.