ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಕಿಗೆ ತೆಂಗಿನ ಸಸಿಗಳ ಆಹುತಿ

Last Updated 15 ಫೆಬ್ರುವರಿ 2011, 10:40 IST
ಅಕ್ಷರ ಗಾತ್ರ

ಹುಳಿಯಾರು: ಖಾಲಿ ಜಮೀನಿಗೆ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ತೋಟದ ಬದುವಿನ ಮೂಲಕ ತೆಂಗಿನತೋಟಕ್ಕೆ ವ್ಯಾಪಿಸಿ ಸುಮಾರು 60ಕ್ಕೂ ಹೆಚ್ಚು ಫಲ ಬಿಡುವ ಹಂತದ ಸಸಿಗಳಿಗೆ ಹಾನಿಯಾದ ಘಟನೆ ಯಳನಾಡು ಪಕ್ಕದ ಬಳ್ಳೆಕಟ್ಟೆಗುಡ್ಲು ಗ್ರಾಮದಲ್ಲಿ ಸೋಮವಾರ ನಡೆದಿದೆ.ಯಳನಾಡು ತಾ.ಪಂ. ಸದಸ್ಯೆ ಜಯಲಕ್ಷ್ಮೀ ಮಲ್ಲಿಕಾರ್ಜುನಯ್ಯ ಅವರಿಗೆ ಈ ತೋಟ ಸೇರಿದೆ. ತೋಟದ ಪಕ್ಕ ವಿದ್ಯುತ್ ಕಂಬಗಳು ಹಾದು ಹೋಗಿದ್ದು ಶಾರ್ಟ್ ಸಕ್ಯೂರ್ಟ್‌ನಿಂದ ಈ ಘಟನೆ ಸಂಭವಿಸಿರಬಹುದು ಎಂದು ಸಂಶಯಿಸಲಾಗಿದೆ.

ತೋಟದ ಪಕ್ಕ ಸುಮಾರು 2-3 ಎಕರೆಯಷ್ಟು ಖಾಲಿ ಜಮೀನು ಇದ್ದು ಅದರಲ್ಲಿ ಸಂಪೂರ್ಣವಾಗಿ ಹುಲ್ಲು ಬೆಳೆದು ಒಣಗಿ ನಿಂತಿತ್ತು. ಮೊದಲು ಹುಲ್ಲಿಗೆ ಬೆಂಕಿ ತಗುಲಿ ಗಾಳಿ ಇದ್ದುದರಿಂದ ತೋಟದ ಬದು ಮತ್ತು ತೋಟಕ್ಕೆ ತಗುಲಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದರಿಂದ 60 ತೆಂಗಿನ ಸಸಿಗಳು,  ಕೊಳವೆಬಾವಿಯ ಸ್ಟಾರ್ಟರ್, ಕೇಬಲ್ ಬೆಂಕಿಗೆ ಆಹುತಿಯಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಬಣವೆಗೆ ಬೆಂಕಿ:
  ಯಳನಾಡು ಗ್ರಾ.ಪಂ ವ್ಯಾಪ್ತಿಯ ಮರಾಠಿ ಪಾಳ್ಯದಲ್ಲಿ ಸೋಮವಾರ ಮಧ್ಯಾಹ್ನ ನಡೆದ ಬೆಂಕಿ ಆಕಸ್ಮಿಕದಲ್ಲಿ ಹುಲ್ಲಿನ ಬಣವೆ ಬೆಂದು ಹೋಗಿದೆ. ಗ್ರಾಮದ ರಾಮಯ್ಯ ಅವರಿಗೆ ಇದು ಸೇರಿದೆ. ರೂ.10 ಸಾವಿರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT