ಶಿರಾ: ಬ್ಯಾಂಕಿಂಗ್ ಸೇವೆಯಿಂದ ವಂಚಿತರಾದ ಬುಡಕಟ್ಟು ಮತ್ತು ಅಲೆಮಾರಿ ಜನರಿಗೆ ಡಿಸಿಸಿ ಬ್ಯಾಂಕ್ ಮೂಲಕ ಬ್ಯಾಂಕಿಂಗ್ ಸೇವೆಗೆ ಒಳಪಡಿಸುವ ಮೂಲಕ ಆರ್ಥಿಕ ಸಹಾಯ ನೀಡುವುದಾಗಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ ಅಧ್ಯಕ್ಷ ಕೆ.ಎನ್.ರಾಜಣ್ಣ ತಿಳಿಸಿದರು.

ನಗರದ ಟಿಎಪಿಸಿಎಂಎಸ್ ನೂತನ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕಿನಿಂದ ತಾಲ್ಲೂಕಿನ ಎಲ್ಲ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ಗಳಿಗೆ ಸ್ವಂತ ಕಟ್ಟಡ ನಿರ್ಮಿಸಿಕೊಳ್ಳಲು ಹಣ ಸಹಾಯ ಹಾಗೂ ರೈತರಿಗೆ ಕೃಷಿಯೇತರ ಸಾಲವನ್ನೂ ನೀಡಿ ಗ್ರಾಹಕ ಸ್ನೇಹಿ ಬ್ಯಾಂಕ್ ಆಗಿ ಪರಿವರ್ತಿಸಲಾಗುವುದು ಎಂದರು.

ಮುರುಗಪ್ಪಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ರವಿಶಂಕರ್, ನಗರಸಭೆ ಅಧ್ಯಕ್ಷ ಟಿ.ರಘು, ಮಾಜಿ ಶಾಸಕ ಸಾ.ಲಿಂಗಯ್ಯ, ಎಂ.ಎನ್.ರಾಜು ಮತ್ತಿತರರು ಇದ್ದರು.

ಅರ್ಜಿ ಆಹ್ವಾನ
ಪಾವಗಡ: ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಆರಂಭವಾಗಿರುವ ಆದರ್ಶ ಆಂಗ್ಲ ಮಾಧ್ಯಮಿಕ ಶಾಲೆಗೆ ಪ್ರವೇಶ ಪರೀಕ್ಷೆ ಏಪ್ರಿಲ್ 15ರಂದು ನಡೆಯಲಿದೆ.

3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳು ಅರ್ಹರಾಗಿದ್ದು, ವಿದ್ಯಾರ್ಥಿಗಳು ಮಾರ್ಚ್ 26ರ ಒಳಗೆ ಅರ್ಜಿಗಳನ್ನು ಪಾವಗಡ ಬಿಇಒ ಕಚೇರಿಗೆ ಸಲ್ಲಿಸಬೇಕು.

ಅರ್ಜಿಗಳು ಬಿಇಒ ಕಚೇರಿ ಅಥವಾ ಆದರ್ಶ ವಿದ್ಯಾಲಯದಲ್ಲಿ ದೊರೆಯುತ್ತವೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಬಿ.ಪಿ.ನಾಗರಾಜಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.