ತುಮಕೂರು: ಬೆಂಗಳೂರು ಎಟಿಎಂನಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಹೋಲುವ ವ್ಯಕ್ತಿಯನ್ನು ಮಧುಗಿರಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದ್ದಾರೆ.

ಈ ವ್ಯಕ್ತಿಯನ್ನು ಅನಂತಪುರದ ವೇಣುಗೋಪಾಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಸೆಕ್ಯುರಿಟಿ ಏಜೆನ್ಸಿ ಇಟ್ಟುಕೊಂಡಿದ್ದ ಈತ ಕಳೆದ ಎರಡು ತಿಂಗಳ ಹಿಂದೆ ಸಿಬ್ಬಂದಿಗೆ ವೇತನ ನೀಡಲಾಗದೆ ಬೆಂಗಳೂರು ತೊರೆದಿದ್ದ. ಅಂದಿನಿಂದ ಮಧುಗಿರಿಯಲ್ಲೇ ಇದ್ದ ಈತ ಈಚೆಗೆ ಎಟಿಎಂನಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪಿಯ ಚಹರೆ ಹೋಲುತ್ತಿದ್ದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ದಿನ ಈ ವ್ಯಕ್ತಿ ಎಲ್ಲಿಂದ, ಏನು ಮಾಡುತ್ತಿದ್ದ ಎಂಬ ಬಗ್ಗೆ ವಿಸ್ತೃತ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.