ಮಂಗಳವಾರ, ಸೆಪ್ಟೆಂಬರ್ 17, 2019
24 °C

ಕ್ರೀಡಾಕೂಟಕ್ಕೆ ₹ 25 ಲಕ್ಷ ಅನುದಾನ ಭರವಸೆ

Published:
Updated:
Prajavani

ಉಡುಪಿ: ಅಖಿಲ ಭಾರತ ದಕ್ಷಿಣ ವಲಯ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ₹ 25 ಲಕ್ಷ ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದ್ದಾರೆ.

ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ನಿಯೋಗ ಈಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ಕ್ರೀಡಾಕೂಟ ಆಯೋಜನೆಗೆ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಮನವಿ ಸ್ಪಂದಿಸಿದ ಸಿಎಂ ₹ 25 ಲಕ್ಷ ನೀಡುವ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

ನಿಯೋಗದಲ್ಲಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ರಘುರಾಮ್ ನಾಯಕ್, ಕಾರ್ಯದರ್ಶಿ ದಿನೇಶ್ ಕುಮಾರ್, ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಕಾರ್ಯದರ್ಶಿ ರಾಜವೇಲು, ಡಾ. ಕೃಷ್ಣಪ್ರಸಾಧ್, ಶಿವರಾಜ್ ಹೆಗ್ಡೆ ಇದ್ದರು.

Post Comments (+)