ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿಯಲ್ಲಿ 10 ಮಂದಿಗೆ ಕೊರೊನಾ ವೈರಸ್‌ ಸೋಂಕು ದೃಢ

187ಕ್ಕೇರಿಕೆಯಾದ ಸೋಂಕಿತರು; 1501 ಮಾದರಿ ಪ್ರಯೋಗಾಲಯಕ್ಕೆ ರವಾನೆ
Last Updated 31 ಮೇ 2020, 13:38 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 10 ಮಂದಿಯಲ್ಲಿ ಕೋವಿಡ್‌–19 ಸೋಂಕು ದೃಢಪಟ್ಟಿದೆ. 9 ಮಂದಿ ಮಹಾರಾಷ್ಟ್ರದಿಂದ, ಒಬ್ಬರು ಕತಾರ್‌ನಿಂದ ಬಂದವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಎಲ್ಲರಿಗೂ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕಿತರಲ್ಲಿ ಏಳು ಪುರುಷರು, ಇಬ್ಬರು ಮಹಿಳೆಯರು ಹಾಗೂ 7 ವರ್ಷದ ಬಾಲಕಿ ಸೇರಿದ್ದು, ಪ್ರಾಥಮಿಕ ಸಂಪರ್ಕ ಪತ್ತೆಹಚ್ಚಲಾಗುತ್ತಿದ್ದು, ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1,501 ಮಾದರಿ ಸಂಗ್ರಹ:ಕೋವಿಡ್‌ ಹಾಟ್‌ಸ್ಪಾಟ್‌ಗಳಿಂದ ಜಿಲ್ಲೆಗೆ ಬಂದಿದ್ದ 1,501 ಮಂದಿಯ ಗಂಟಲ ದ್ರವವನ್ನು ಭಾನುವಾರ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಒಟ್ಟು 7257 ವರದಿಗಳು ಬರುವುದು ಬಾಕಿ ಇದೆ.

9 ಮಂದಿ ಐಸೊಲೇಷನ್‌ ವಾರ್ಡ್‌ಗೆ: ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ 9 ಮಂದಿಗೆ ಐಸೊಲೇಷನ್ ವಾರ್ಡ್‌ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 187ಕ್ಕೇರಿಕೆಯಾಗಿದ್ದು, 64 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದು, 122 ಸಕ್ರಿಯ ಪ್ರಕರಣಗಳು ಬಾಕಿ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT