ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಒಂದೇ ದಿನ 3,910 ಹಿರಿಯ ನಾಗರಿಕರಿಗೆ ಲಸಿಕೆ, 11 ಮಂದಿಯಲ್ಲಿ ಕೋವಿಡ್‌

Last Updated 12 ಮಾರ್ಚ್ 2021, 15:54 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 11 ಮಂದಿಯಲ್ಲಿ ಕೋವಿಡ್‌–19 ಪ್ರಕರಣಗಳು ದೃಡಪಟ್ಟಿದ್ದು, ಸೋಂಕಿತರಲ್ಲಿ ಐವರು ಮಹಿಳೆಯರು ಹಾಗೂ 6 ಪುರುಷರು ಇದ್ದಾರೆ. ಸೋಂಕಿತರೆಲ್ಲರೂ ಉಡುಪಿ ತಾಲ್ಲೂಕಿನವರಾಗಿದ್ದು, ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಇದುವರೆಗೂ 3,81,708 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, 3,57,903 ಮಂದಿಯ ವರದಿ ನೆಗೆಟಿವ್ ಹಾಗೂ 23,805 ವರದಿ ಪಾಸಿಟಿವ್ ಬಂದಿದೆ. ಶುಕ್ರವಾರ 14 ಮಂದಿ ಸೇರಿ 23517 ಸೋಂಕಿತರು ಗುಣಮುಖರಾಗಿದ್ದಾರೆ. 190 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಲಸಿಕೆ:ಮೊದಲ ಹಂತದ ಕೋವಿಡ್‌ ಲಸಿಕಾ ಅಭಿಯಾನದಲ್ಲಿ ಇದುವರೆಗೂ 18,106 ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆದಿದ್ದಾರೆ. ಜಿಲ್ಲೆಯಲ್ಲಿ 23,889 ಕೋವಿಡ್ ಲಸಿಕಾ ಗುರಿ ಹೊಂದಲಾಗಿದ್ದು, ಶೇ 76ರಷ್ಟು ಸಾಧನೆಯಾಗಿದೆ. 23,889 ಮಂದಿಯ ಪೈಕಿ 13,677 ಮಂದಿ ಎರಡನೇ ಹಂತದ ಡೋಸ್‌ ಪಡೆದುಕೊಂಡಿದ್ದಾರೆ.

ಎರಡನೇ ಹಂತದ ಲಸಿಕಾ ಅಭಿಯಾನದಲ್ಲಿ 4,283 ಗುರಿಯ ಪೈಕಿ 3,260 ಮಂದಿ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದ್ದು ಶೇ 76ರಷ್ಟು ಗುರಿ ಸಾಧನೆಯಾಗಿದೆ. 534 ಮಂದಿಗೆ ಎರಡನೇ ಡೋಸ್ ನೀಡಲಾಗಿದೆ.

ಮೂರನೇ ಹಂತದಲ್ಲಿ 60 ವರ್ಷ ಮೇಲ್ಟಟ್ಟ ಹಾಗೂ ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ 45 ರಿಂದ 59 ವರ್ಷದೊಳಗಿನವರಿಗೆ ಕೋವಿಡ್‌ ಲಸಿಕೆ ಹಾಕಲಾಗುತ್ತಿದ್ದು, ಇದುವರೆಗೂ 60 ವರ್ಷ ಮೇಲ್ಪಟ್ಟ 10,090 ಮಂದಿಗೆ ಹಾಗೂ 45 ರಿಂದ 59 ವರ್ಷದೊಳಗಿನ 1082 ಮಂದಿಗೆ ಲಸಿಕೆ ಹಾಕಲಾಗಿದೆ. ಶುಕ್ರವಾರ ಒಂದೇ ದಿನ 3910 ಹಿರಿಯ ನಾಗರಿಕರಿಗೆ ಲಸಿಕೆ ಹಾಕಲಾಗಿದೆ.

ಎರಡನೇ ಹಂತದ ಸೋಂಕಿನ ಅಲೆ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು. ಸೋಂಕಿನ ಅಪಾಯದಿಂದ ತಪ್ಪಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್‌ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಡೋಸ್‌ಗೆ ₹ 250 ದರ ನಿಗದಿಪಡಿಸಲಾಗಿದೆ. ಆರೋಗ್ಯ ಸೇತು ಆ್ಯಪ್‌ನಲ್ಲಿಯೂ ನೋಂದಣಿ ಮಾಡಿಸಿಕೊಂಡು ಲಸಿಕೆ ಪಡೆಯಬಹುದು. ಆನ್‌ಲೈನ್‌ ನೋಂದಣಿ ಸಾಧ್ಯವಿಲ್ಲದವರು ನೇರವಾಗಿ ಆಸ್ಪತ್ರೆ ಬಂದು ಆಧಾರ್ ಕಾರ್ಡ್‌ ಪ್ರತಿ ನೀಡಿ ನೋಂದಾಯಿಸಿಕೊಂಡು ಲಸಿಕೆ ಪಡೆಯಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT