ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ದರ್ಶನಕ್ಕೆ ಕಾರ್ಕಳ ವಲಯದ 116 ವಿದ್ಯಾರ್ಥಿ ಆಯ್ಕೆ

Published 15 ಫೆಬ್ರುವರಿ 2024, 14:06 IST
Last Updated 15 ಫೆಬ್ರುವರಿ 2024, 14:06 IST
ಅಕ್ಷರ ಗಾತ್ರ

ಕಾರ್ಕಳ: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರ ವರ್ಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಕರ್ನಾಟಕ ದರ್ಶನ ಕಾರ್ಯಕ್ರಮ’ಕ್ಕೆ ನಗರದ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆ, ಪೆರ್ವಾಜೆ ಬಳಿಯಲ್ಲಿ ಚಾಲನೆ ನೀಡಲಾಯಿತು.

ಕಾರ್ಕಳ ವಲಯದ 116 ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆಯಲಿದ್ದಾರೆ. ಕಾರ್ಕಳ ತಹಶೀಲ್ದಾರ್ ನರಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ. ಲೋಕೇಶ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪ್ರವಾಸೋದ್ಯಮ ಇಲಾಖೆ ಉಡುಪಿಯ ರಮೇಶ್, ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆಯ ಸಹಾಯಕ ನಿರ್ದೇಶಕ ಭಾಸ್ಕರ್ ಟಿ, ಪೆರ್ವಾಜೆ ಪ್ರೌಢಶಾಲೆಯ ಮುಖ್ಯ ಶಿಕ್ಷಕ ದಿವಾಕರ್, ಶಿಕ್ಷಣ ಸಂಯೋಜಕ ಬಾಲಕೃಷ್ಣ ನಾಯಕ್, ನೋಡಲ್ ಅಧಿಕಾರಿ ಪ್ರಕಾಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT