ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ: 13 ಮಂದಿಗೆ ಕೋವಿಡ್‌

Published : 12 ಫೆಬ್ರುವರಿ 2021, 17:30 IST
ಫಾಲೋ ಮಾಡಿ
Comments

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 13 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಉಡುಪಿಯ 7, ಕುಂದಾಪುರದ 3, ಕಾರ್ಕಳದ ಇಬ್ಬರು ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 23444 ಇದ್ದು, 59 ಸಕ್ರಿಯ ಸೋಂಕಿತರು ಇದ್ದಾರೆ. 23196 ಮಂದಿ ಗುಣಮುಖರಾಗಿದ್ದಾರೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಫ್ರಂಟ್‌ಲೈನ್‌ ಕಾರ್ಯಕರ್ತರಿಗೆ 2ನೇ ಹಂತದಲ್ಲಿ ಕೋವಿಡ್‌ ಲಸಿಕೆ ಅಭಿಯಾನ ಮುಂದುವರಿದಿದ್ದು, 4,083 ಲಸಿಕೆ ಗುರಿಗೆ ಪ್ರತಿಯಾಗಿ 2,031 ಮಂದಿಗೆ ಲಸಿಕೆ ಹಾಕಲಾಗಿದೆ. ಶೇ 49.74ರಷ್ಟು ಗುರಿ ಸಾಧನೆಯಾಗಿದೆ. ಮೊದಲ ಹಂತದ ಲಸಿಕಾ ಅಭಿಯಾನದಲ್ಲಿ 25,350 ಗುರಿಗೆ ಪ್ರತಿಯಾಗಿ 15,765 ಮಂದಿಗೆ ಲಸಿಕೆ ಹಾಕಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT