ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 864 ಮಂದಿ ಗುಣಮುಖ; 120 ಪಾಸಿಟಿವ್‌

ನಾಲ್ವರು ಸೋಂಕಿತರು ಸಾವು: ಮೃತರ ಸಂಖ್ಯೆ 134ಕ್ಕೇರಿಕೆ
Last Updated 17 ಸೆಪ್ಟೆಂಬರ್ 2020, 16:26 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಗುರುವಾರ ಕೋವಿಡ್‌ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಿದ್ದು, ಒಂದೇ ದಿನ 864 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 12,907 ಮಂದಿ ಗುಣಮುಖರಾದಂತಾಗಿದ್ದು, ಸಕ್ರಿಯ ಸೋಂಕಿತ ಪ್ರಕರಣಗಳು 1,358 ಇವೆ.

ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಇಳಿಮುಖವಾಗುತ್ತಿದ್ದು, ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ಆಶಾದಾಯಕ ಬೆಳವಣಿಕೆಯಾಗಿದ್ದು, ಸಾರ್ವಜನಿಕರಲ್ಲಿ ಕೊಂಚ ನೆಮ್ಮದಿ ತಂದಿದೆ.

ಗುರುವಾರ120 ಮಂದಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದ್ದು, ಸೋಂಕಿತರನ್ನು ಕೋವಿಡ್‌ ಆಸ್ಪತ್ರೆಗಳಿಗೆ ಹಾಗೂ ಹೋಂ ಐಸೊಲೇಷನ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,398 ಇದೆ.

ಗುರುವಾರ ನಾಲ್ವರು ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 134ಕ್ಕೇರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT