ಗುರುವಾರ , ಆಗಸ್ಟ್ 11, 2022
23 °C
ಇಳಿಮುಖವಾಗುತ್ತಿರುವ ಸೋಂಕಿತರ ಸಂಖ್ಯೆ

ಉಡುಪಿ: 126 ಮಂದಿಯಲ್ಲಿ ಕೋವಿಡ್‌ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 126 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 53, ಕುಂದಾಪುರದ 47, ಕಾರ್ಕಳದ 20 ಹಾಗೂ ಇತರೆ ಜಿಲ್ಲೆಗಳ 6 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 

ಪ್ರಾಥಮಿಕ ಸಂಪರ್ಕದಿಂದ 30, ಶೀತಜ್ವರದ ಲಕ್ಷಣಗಳಿದ್ದ 46, ತೀವ್ರ ಉಸಿರಾಟದ ಸಮಸ್ಯೆ ಇದ್ದ 11 ಹಾಗೂ ಅಂತರ ಜಿಲ್ಲೆಗಳ ಪ್ರವಾಸ ಮಾಡಿದ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 33 ಜನರ ಸೋಂಕಿನ ಮೂಲ ಪತ್ತೆಯಾಗಿಲ್ಲ. 

69 ರೋಗಿಗಳಲ್ಲಿ ರೋಗದ ಲಕ್ಷಣಗಳು ಕಂಡುಬಂದರೆ, 57 ಜನರಲ್ಲಿ ಲಕ್ಷಣಗಳು ಪತ್ತೆಯಾಗಿಲ್ಲ. ಸೋಂಕಿತರಲ್ಲಿ 69 ಪುರುಷರು, 57 ಮಹಿಳೆಯರು ಇದ್ದಾರೆ.

ಪ್ರಾಥಮಿಕ ಸಂಪರ್ಕ ಹಾಗೂ ರೋಗ ಲಕ್ಷಣಗಳಿದ್ದ 2,019 ಶಂಕಿತರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 154 ರೋಗಿಗಳು ಗುಣಮುಖರಾಗಿದ್ದಾರೆ. ಇದುವರೆಗೂ 12,176 ಮಂದಿ ಸೋಂಕು ಮುಕ್ತರಾಗಿದ್ದು, ಜಿಲ್ಲೆಯಲ್ಲಿ 1732 ಸಕ್ರಿಯ ಸೋಂಕಿತ ಪ್ರಕರಣಗಳಿವೆ. 14,038 ಒಟ್ಟು ಪ್ರಕರಣಗಳಿವೆ. 130 ಸೋಂಕಿತರು ಮೃತಪಟ್ಟಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು