ಭಾನುವಾರ, ಆಗಸ್ಟ್ 1, 2021
27 °C
ಇಬ್ಬರು ಸೋಂಕಿತರು ಸಾವು: ಮೃತರ ಸಂಖ್ಯೆ 35ಕ್ಕೇರಿಕೆ

ಉಡುಪಿ: ಜಿಲ್ಲೆಯಲ್ಲಿ 136 ಮಂದಿಗೆ ಕೋವಿಡ್ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಶನಿವಾರ ಇಬ್ಬರು ಕೋವಿಡ್‌ ಸೋಂಕಿತರು ಮೃತಪ‍ಟ್ಟಿದ್ದು, ಸಾವಿನ ಸಂಖ್ಯೆ 35 ಕ್ಕೇರಿಕೆಯಾಗಿದೆ. 136 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 

ಉಡುಪಿ ತಾಲ್ಲೂಕಿನ 65, ಕುಂದಾಪುರದ 37 ಹಾಗೂ ಕಾರ್ಕಳ ತಾಲ್ಲೂಕಿನ 33 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರಲ್ಲಿ 70 ಪುರುಷರು, 66 ಮಹಿಳೆಯರು ಇದ್ದಾರೆ.

ರೋಗದ ಲಕ್ಷಣಗಳಿದ್ದವರಿಗೆ ಕೋವಿಡ್‌ ಆಸ್ಪತ್ರೆಗಳಲ್ಲಿ ಹಾಗೂ ರೋಗ ಲಕ್ಷಣಗಳಿಲ್ಲದ 753 ಮಂದಿಗೆ ಹೋಂ ಐಸೊಲೇಷನ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ 100 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 2,646 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

736 ಮಾದರಿ ಸಂಗ್ರಹ: ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ 736 ಜನರ ಮಾದರಿ ಸಂಗ್ರಹಿಸಲಾಗಿದ್ದು, 446 ವರದಿಗಳು ಬರುವುದು ಬಾಕಿ ಇದೆ. ಸೋಂಕಿನ ಲಕ್ಷಣಗಳು ಕಂಡುಬಂದ 30 ಮಂದಿಯನ್ನು ಐಸೊಲೇಷನ್‌ ವಾರ್ಡ್‌ಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,492ಕ್ಕೇರಿಕೆಯಾಗಿದ್ದು, 1,811 ಸಕ್ರಿಯ ಸೋಂಕಿತ ಪ್ರಕರಣಗಳು ಬಾಕಿ ಇವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು