ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

14 ಅಡಿ ಉದ್ದದ ಕಾಳಿಂಗ ಸೆರೆ: ಆತಂಕ ಮೂಡಿಸಿದ್ದ ಹಾವು

Last Updated 12 ಅಕ್ಟೋಬರ್ 2022, 4:54 IST
ಅಕ್ಷರ ಗಾತ್ರ

ಕಾರ್ಕಳ: ಇಲ್ಲಿನ ಜನರಲ್ಲಿ ಕೆಲ ದಿನಗಳಿಂದ ಆತಂಕ ಮೂಡಿಸಿದ್ದ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರಗ ತಜ್ಞ ಅನಿಲ್ ಪ್ರಭು ಮಂಗಳವಾರ ಸೆರೆ ಹಿಡಿದರು.

ಅನಂತಶಯನದ ತೆಳ್ಳಾರು ರಸ್ತೆಯ ವಕೀಲರ ಮನೆಯೊಂದರ ಬಳಿ ತಿರುಗಾಡುತ್ತಿದ್ದ ಕಾಳಿಂಗ ಸರ್ಪದ ಕುರಿತು ಪುರಸಭಾ ಸದಸ್ಯ ಶುಭದ ರಾವ್ ಅವರ ಗಮನಕ್ಕೆ ತಂದಿದ್ದು, ಅವರು ಅನಿಲ್ ಪ್ರಭು ಅವರನ್ನು ಸಂಪರ್ಕಿಸಿದರು.

ಶುಭದ ರಾವ್ ಮಾತನಾಡಿ, ‘ಅನೇಕ ದಿನಗಳಿಂದ ಕಾಳಿಂಗ ಸರ್ಪಗಳು ವಸತಿ ಪ್ರದೇಶಕ್ಕೆ ಬರುತ್ತಿವೆ. ಅರಣ್ಯ ಇಲಾಖೆ ಹೆಚ್ಚು ಕಾಳಜಿವಹಿಸಿ ಹಾವನ್ನು ಹಿಡಿದು, ಜನರ ಆತಂಕ ನಿವಾರಿಸಬೇಕು’ ಎಂದರು.

ಸೆರೆ ಹಿಡಿದ ಕಾಳಿಂಗ ಸರ್ಪವನ್ನು ಉಪವಲಯ ಅರಣ್ಯಾಧಿಕಾರಿ ಪ್ರಕಾಶ್ ಅವರ ಸಮ್ಮುಖದಲ್ಲಿ ಕುದುರೆಮುಖ ಅರಣ್ಯಕ್ಕೆ ಕೊಂಡೊಯ್ದು ಬಿಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT