ಮಂಗಳವಾರ, ಆಗಸ್ಟ್ 3, 2021
27 °C

ಹೆದ್ದಾರಿ ಬದಿಯಲ್ಲಿ 1,800 ಸಸಿ ನಾಟಿ: 1800 ಗಿಡ ನೆಡುವೆ ಯೋಜನೆ- ಲಾಲಾಜಿ ಮೆಂಡನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾಪು (ಪಡುಬಿದ್ರಿ): ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಪುವಿನಿಂದ ಕಟಪಾಡಿವರೆಗಿನ ಆರು ಕಿ.ಮೀ ವ್ಯಾಪ್ತಿಯಲ್ಲಿ ಈ ಬಾರಿ ಹೊಸದಾಗಿ 1,800 ಹೊಸ ಗಿಡಗಳನ್ನು ನೆಟ್ಟು, ಪೋಷಿಸಲಾಗುವುದು ಎಂದು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.

ಜಿಲ್ಲಾ ಪಂಚಾಯಿತಿ ಅರಣ್ಯ ಇಲಾಖೆಯ ವತಿಯಿಂದ ಕಾಪುವಿನಲ್ಲಿ ಸಾಮಾಜಿಕ ಅರಣ್ಯ ಬೆಳೆಸುವ ಯೋಜನೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಯೋಜನೆಯ ಕಾಮಗಾರಿಯ ವೇಳೆ ಹೆದ್ದಾರಿಯ ಉದ್ದಗಲದಲ್ಲಿ ಸಾವಿರಾರು ಮರಗಳನ್ನು ಕಡಿಯಲಾಗಿದೆ. ಅದಕ್ಕೆ ಪ್ರತಿಯಾಗಿ ಅರಣ್ಯ ಇಲಾಖೆ ಹೊಸ ಗಿಡ ಬೆಳೆಸುವ ಯೋಜನೆ ಹಾಕಿಕೊಂಡಿದೆ ಎಂದರು.

ಉಡುಪಿ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ ಮಾತನಾಡಿ, ‘ಕಾಪು ವ್ಯಾಪ್ತಿಯಲ್ಲಿ ನೆಡುವ ಗಿಡಗಳನ್ನು ಮೂರು ವರ್ಷ ಪೋಷಿಸುವ ಜವಾಬ್ದಾರಿಯನ್ನು ಅರಣ್ಯ ಇಲಾಖೆ ವಹಿಸಿಕೊಳ್ಳಲಿದೆ’ ಎಂದರು.

ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಲಯನ್ಸ್ ಕ್ಲಬ್ ಮಾಜಿ ಜಿಲ್ಲಾ ಗವರ್ನರ್ ಶ್ರೀಧರ ಶೇಣವ, ಕಡಪಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿನಯ ಬಲ್ಲಾಳ್, ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪ್ರವೀಣ್ ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಜೀವನ್ ದಾಸ್ ಶೆಟ್ಟಿ, ಅರಣ್ಯ ರಕ್ಷಕರಾದ ಮಂಜುನಾಥ್, ಜಯರಾಮ ಶೆಟ್ಟಿ, ಅಭಿಲಾಷ್, ಗಣಪತಿ ನಾಯಕ್, ಅಶ್ವಿನ್, ಜಾಯ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.