ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಒಂದೇ ದಿನ 28 ಮಂದಿಯಲ್ಲಿ ಕೋವಿಡ್ ಸೋಂಕು

Last Updated 21 ಮೇ 2020, 12:23 IST
ಅಕ್ಷರ ಗಾತ್ರ

ಉಡುಪಿ: ಮಹಾರಾಷ್ಟ್ರ, ತೆಲಂಗಾಣ, ಕೇರಳ ಹಾಗೂ ಯುಎಇನಿಂದ ಬಂದಿದ್ದ 28 ಮಂದಿಯಲ್ಲಿ ಕೋವಿಡ್–19 ಸೋಂಕು ದೃಢ‍ಪಟ್ಟಿದೆ. ಸೋಂಕಿತರಲ್ಲಿ 6 ಪುರುಷರು, ಐವರು ಮಹಿಳೆಯರು ಹಾಗೂ 16 ಮಕ್ಕಳು ಇದ್ದು, ಎಲ್ಲರಿಗೂ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.

ಮಹಾರಾಷ್ಟ್ರದ ಹಲವೆಡೆಗಳಿಂದ ಬಂದಿದ್ದ 23, ತೆಲಂಗಾಣದಿಂದ ಬಂದಿದ್ದ ಮೂವರು ಹಾಗೂ ಕೇರಳದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಒಬ್ಬರಲ್ಲಿ ಹಾಗೂ ಯುಎಇನಿಂದ ಮರಳಿದ್ದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇವರಲ್ಲಿ ಇಬ್ಬರು ಕಾರವಾರದ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಈಚೆಗೆ ಕ್ವಾರಂಟೈನ್‌ನಲ್ಲಿದ್ದ 199 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅವರ ಪೈಕಿ 27 ಮಂದಿಗೆ ಪಾಸಿಟಿವ್ ಬಂದಿದೆ. ಕ್ವಾರಂಟೈನ್‌ನಲ್ಲಿರುವ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT