ಶುಕ್ರವಾರ, ನವೆಂಬರ್ 22, 2019
23 °C

ಸರ್ವ ಜನರ ಸಂವಿಧಾನ ಸಮಾವೇಶ 28ರಂದು

Published:
Updated:
Prajavani

ಉಡುಪಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ (ಅಂಬೇಡ್ಕರ್ ವಾದ) ಸೆ.28ರಂದು ನಗರದ ಬಾಸೆಲ್‌ ಮಿಷನರೀಸ್‌ ಮೊಮೊರಿಯಲ್‌ ಸಭಾಂಗಣದಲ್ಲಿ ಸರ್ವ ಜನರ ಸಂವಿಧಾನದ ಸಮಾವೇಶ ಹಮ್ಮಿಕೊಳ್ಳಲಾಗಿದ ಎಂದು ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಕಾರ್ಯಕ್ರಮವನ್ನು ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಉದ್ಘಾಟಿಸಲಿದ್ದಾರೆ. ತೋಂಟದಾರ್ಯ ಶಾಖಾಮಠದ ನಿಜಗುಣ ಪ್ರಭು ಸ್ವಾಮೀಜಿ ಮಾತನಾಡಲಿದ್ದಾರೆ. ಎಸ್‌ಸಿ, ಎಸ್‌ಟಿ ಗುತ್ತಿಗೆದಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಹಾದೇವಸ್ವಾಮಿ, ಮುಖಂಡರಾದ ಕೆ.ಎಲ್‌.ಅಶೋಕ್, ಅಖಿಲ ಭಾರತ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಜತ್ತನ್ನ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಅಂದು ಬೆಳಿಗ್ಗೆ 10.30ಕ್ಕೆ ನಗರದ ಬೋರ್ಡ್‌ ಹೈಸ್ಕೂಲ್‌ನಿಂದ ಮೆರವಣಿಗೆ ನಡೆಯಲಿದ್ದು, ಪ್ರಮುಖ ರಸ್ತೆಗಳಿಗೆ ಸಾಗಲಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸುಂದರ್ ಮಾಸ್ತರ್ ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಅಣ್ಣಪ್ಪ ಕಾರ್ಕಳ, ಸುಂದರ್ ತೆಕ್ಕಟ್ಟೆ, ಪರಮೇಶ್ವರ ಉಪ್ಪೂರು, ಲೋಕೇಶ್ ಪಡುಬಿದ್ರಿ, ಶಿವಾನಂದ ಮೂಡುಬೆಟ್ಟು ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)