ಗುರುವಾರ , ಜುಲೈ 29, 2021
20 °C
ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಾರ್ಯದರ್ಶಿ ರತ್ನಕುಮಾರ್

ಮುಂದಿನ ಶೈಕ್ಷಣಿಕ ವರ್ಷ;4 ವರ್ಷದ ಬಿಎಸ್ಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರ್ವ: ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದಿಂದ ಪ್ರವರ್ತಿತ ಬಂಟಕಲ್ ಮಧ್ವ ವಾದಿರಾಜ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ 4 ವರ್ಷಗಳ ಬಿಎಸ್‍ಸಿ ಪದವಿ ಶಿಕ್ಷಣ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ 2021-22 ರ ಸಾಲಿನಿಂದ ನ್ಯಾಕ್, ಎನ್.ಬಿ.ಎ. ಮಾನ್ಯತೆ ಪಡೆದಿರುವ ತಾಂತ್ರಿಕ ಕಾಲೇಜುಗಳಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅನ್ವಯ ನಾಲ್ಕು ವರ್ಷಗಳ ಬಿ.ಎಸ್ಸಿ. ಪದವಿ ತರಗತಿ ಆರಂಭಿಸಲು ಉದ್ಧೇಶಿಸಿಲಾಗಿದೆ. ವಿದ್ಯಾಲಯ ಕೂಡ ಈ ಕೋರ್ಸ್ ನಡೆಸಲು ಅರ್ಹತೆ ಪಡೆದಿದೆ. ಬಂಟಕಲ್ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಶೈಕ್ಷಣಿಕ ಸೇವೆಯಲ್ಲಿ ಹನ್ನೊಂದು ವರ್ಷಗಳನ್ನು ಪೂರೈಸುತ್ತಿದೆ ಎಂದು ತಿಳಿಸಿದರು.

ಮಾಹಿತಿ ತಂತ್ರಜ್ಞಾನ ಮತ್ತು ವೈಜ್ಞಾನಿಕ ತಂತ್ರಜ್ಞಾನ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಶೈಕ್ಷಣಿಕ ಕೇತ್ರದಲ್ಲಿ ರಾಜ್ಯವು ದೇಶದಲ್ಲಿಯೇ ಮೊದಲ ಸ್ಥಾನಕ್ಕೆ ಬರಬೇಕು ಎಂಬ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಸಿ.ಎನ್.ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಕರಿಸಿದ್ಧಪ್ಪ ಅವರ ಕನಸಿನ ಯೋಜನೆಗೆ ನಮ್ಮ ಸಂಸ್ಥೆಯು ಬೆಂಬಲಿಸಲಿದೆ ಎಂದು ತಿಳಿಸಿದರು. 

ಜೊತೆಗೆ ತಾಂತ್ರಿಕ ಕ್ಷೇತ್ರದ ನೂತನ ಮಜಲುಗಳಾದ ಕೃತಕ ಬುದ್ಧಿ ಮತ್ತೆ, ದತ್ತಾಂಶ ವಿಜ್ಞಾನ ಎಂಬ ವಿಷಯಗಳಲ್ಲಿ ನೂತನ ಎಂಜಿನಿಯರಿಂಗ್ ಕೋರ್ಸ್‌ಗಳನ್ನು 2021-22 ನೇ ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸಲು ಅನುಮತಿ ಸಿಕ್ಕಿದೆ. ಇದರ ಜತೆಗೆ ಈಗಾಗಲೇ ಇರುವ ಸಿವಿಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ಹಾಗೂ ಮೆಕಾನಿಕಲ್ ಎಂಜಿನಿಯರಿಂಗ್ ವಿಭಾಗಗಳಲ್ಲೂ ಅಧ್ಯಯನಕ್ಕೆ ಅವಕಾಶವಿದೆ ಎಂದರು.

ಹೊಸ ಹೊಸ ಆವಿಷ್ಕಾರಗಳು ನಡೆಯುತ್ತಿರುವ, ಮುಂದಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಉತ್ತಮ ಉದ್ಯೋಗಾವಕಾಶ ಪಡೆಯಲು ಅವಕಾಶ ನೀಡಬಲ್ಲ ಈ ಕೋರ್ಸ್‍ಗಳಿಂದ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನವನ್ನು ಸುಭದ್ರಗೊಳಿಸಲು ಸಹಕಾರಿಯಾಗಲಿದೆ ಎಂದು
ತಿಳಿಸಿದರು.

ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್. ಉಪ ಪ್ರಾಂಶುಪಾಲ ಗಣೇಶ್ ಐತಾಳ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.