ಸೋಮವಾರ, ಅಕ್ಟೋಬರ್ 26, 2020
21 °C

ನೆರೆ ಹಾನಿ: ಉಡುಪಿಗೆ ₹40 ಕೋಟಿ ಬಿಡುಗಡೆಗೆ ಸಿಎಂ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಸಂಭವಿಸಿದ ನೆರೆ ಹಾನಿ ಪರಿಹಾರ ಕಾರ್ಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ₹ 40 ಕೋಟಿ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದ್ದಾರೆ.

ಜಿಲ್ಲೆಯ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್.ಮೆಂಡನ್, ವಿ. ಸುನೀಲ್ ಕುಮಾರ್, ಸುಕುಮಾರ್ ಶೆಟ್ಟಿ ಅವರನ್ನೊಳಗೊಂಡ ಶಾಸಕರ ತಂಡ ಶನಿವಾರ ಮುಖ್ಯಮಂತ್ರಿಯನ್ನು ಭೇಟಿಯಾಗಿ ಪ್ರಾಕೃತಿಕ ವಿಕೋಪದಡಿ ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು.

ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಮೊದಲ ಹಂತದಲ್ಲಿ  ₹ 40 ಕೋಟಿ ಬಿಡುಗಡೆಗೆ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ  ಐ.ಎಸ್.ಎನ್. ಪ್ರಸಾದ್‌ಗೆ ಸೂಚನೆ ನೀಡಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ಉಡುಪಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಉಂಟಾದ ನಷ್ಟದ ಬಗ್ಗೆ ತಿಳಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಆಟೋ-ಟ್ಯಾಕ್ಸಿ ಚಾಲಕರಿಗೆ ಸರ್ಕಾರದ ಸಹಾಯಧನ ಪಡೆಯುವಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾಗಿದ್ದು, ಕೂಡಲೇ ಸರಿಪಡಿಸಿ ಅರ್ಹರಿಗೆ ಸಹಾಯಧನ ನೀಡಬೇಕು ಎಂದು ಸದನದಲ್ಲಿ ಒತ್ತಾಯಿಸಲಾಯಿತು ಎಂದು ಶಾಸಕ ರಘುಪತಿ ಭಟ್‌ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು